ಸುದ್ದಿಲೈವ್.ಕಾಂ/ಶಿವಮೊಗ್ಗ

ರಾಜ್ಯ ರಾಜಕಾರಣಕ್ಕೆ ಮರಳಲಿದ್ದೇನೆ ಎಂದು ನಿನ್ನೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಸಂಸದ ಬಿ.ವೈ.ರಾಘವೇಂದ್ರ ಇಂದು ಉಲ್ಟಾ ಹೊಡೆದಿದ್ದಾರೆ.

ಇಂದು ಜಿಪಂನಲ್ಲಿ ದಿಶಾ ಸಭೆ ಮುಗಿಸಿ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದ ಸಂಸದರಿಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಒಂದು ವಿಧಾನ ಸಭೆಗೆ ಸೀಮಿತವಾಗದೆ 8 ತಾಲೂಕಿನ ಸೇವೆ ಮಾಡಲು ಅವಕಾಶ ಮಾಡಿ ಕೊಟ್ಟ ಜಿಲ್ಲೆಯ ಜನತೆಗೆ ನಾನು ಅಭಾರಿ ಎಂದು ಹೇಳಿದರು.

ನಿನ್ನೆ ಶಿರಸಿಯಲ್ಲಿ ಮಾಧ್ಯಮದವರು ಪ್ರಶ್ನೆ ಕೇಳಿದ್ದರು. ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ. ಶಿವಮೊಗ್ಗದ ಜನತೆ ಮೂರು ಬಾರಿ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಮುಂದು ವರೆಯುವ ಅಪೇಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಸಹೋದರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜೇಂದ್ರರಿಗೂ ಸಿಎಂ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಮಾನ ನೀಡಬೇಕೆಂಬ ಬೇಡಿಕೆ ಇಟ್ಟಿಲ್ಲವೆಂದರು.

Share to this News
  •  
  •  
  •  
  •  
  •  
  •  
  •  
  •  
  •  
  •  

LEAVE A REPLY

Please enter your comment!
Please enter your name here