ಸುದ್ದಿಲೈವ್.ಕಾಂ/ಶಿವಮೊಗ್ಗ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಈ ಪರಿಕಲ್ಪನೆಯ ಅಂಗವಾಗಿ ದಿ:16/10/2021ರ ಶನಿವಾರ ಬೆಳಗ್ಗೆ 11.00ಕ್ಕೆ ಶಿವಮೊಗ್ಗ ತಾಲೂಕು ನಿಧಿಗೆ-2ನೇ ಹೋಬಳಿ, ಗಾಜನೂರು ಗ್ರಾಮದ ಶ್ರೀ ತುಂಗಾ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಆದ್ದರಿಂದ ಗಾಜನೂರು ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ದಿ:16/10/2021 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

Share to this News
  •  
  •  
  •  
  •  
  •  
  •  
  •  
  •  
  •  
  •  

LEAVE A REPLY

Please enter your comment!
Please enter your name here