ರಾಜ್ಯಶಿಕ್ಷಣ

ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ 24 ಕೋಟಿ ರೂ. ಬಿಡುಗಡೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆಯು 24.67 ಕೋಟಿ ರೂ. ಬಿಡುಗಡೆ ಮಾಡಿದೆ.

ಈ ಅನುದಾನವನ್ನು 2021-22ನೇ ಸಾಲಿನ ವಿವಿಧ ವಿಷಯಗಳಿಗೆ ಸರ್ಕಾರದ ಆದೇಶಗಳ ಅನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕವಾಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಪಾವತಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.

ಕಾರ್ಯಭಾರ ಇದ್ದು, ನೇಮಕ ಮಾಡಿಕೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಅನುದಾನ ಬಳಕೆ ಮಾಡಬೇಕು. ಮೇ ತಿಂಗಳ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದಿನ ಶಾಲೆಗಳಲ್ಲಿ ಬಳಕೆ ಮಾಡಿದರೆ, ಗೌರವಧನವನ್ನು ಪಾವತಿಸದ್ದಲ್ಲಿ ಪ್ರಾಂಶುಪಾರನ್ನೇ ನೇರ ಹೊಣೆಗಾರರಾಗಿ ಮಾಡಲಾಗುತ್ತದೆ.

ಜಂಟಿ ನಿರ್ದೇಶಕರುಗಳಿಂದ ಅನುಮೋದನೆಗೊಂಡಿಲ್ಲದ, ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಿದಲ್ಲಿ, ಸಂಬಂಧಪಟ್ಟ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Spread the love

Related Articles

Leave a Reply

Your email address will not be published.

Back to top button