ರಾಜಕೀಯ

ಮಕ್ಕಳೊಂದಿಗೆ ದೇವೇಗೌಡರ ಹುಟ್ಟು ಹಬ್ಬ ಆಚರಿಸಿದ ಮಾಜಿ ಶಾಸಕಿ-ರೋಗಿಗಳಿಗೆ ಹಣ್ಣು,ಬಿಸ್ಕತ್,ಬ್ರೆಡ್ ಹಂಚಿದ ಜೆಡಿಎಸ್ ಜಿಲ್ಲಾ ನಾಯಕರು

ಸುದ್ದಿಲೈವ್.ಕಾಂ/ಶಿವಮೊಗ್ಗ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಮೆಗ್ಗಾನ್ ಹೊರ ಮತ್ತು ಒಳರೋಗಿಗಳಿಗೆ ಹಣ್ಣು ಬ್ರೆಡ್,ಬಿಸ್ಕತ ಹಂಚಲಾಯಿತು.

ಬೆಂಗಳೂರಿನಲ್ಲಿರುವ ದೇವೇಗೌಡರ ನಿವಾಸದಲ್ಲಿ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹುಟ್ಟುಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ. ಅದರಂತೆ ಇಂದು ರಾಜ್ಯದ್ಯಂತ ದೇವೇಗೌಡರ 90 ನೇ ಹುಟ್ಟುಹಬ್ಬವನ್ನ ಪಕ್ಷ ಮತ್ತು ಅಭಿಮಾನಿಗಳು ವಿಭಿನ್ನವಾಗಿ ಆಚರಿಸಿದರು. ಶಿವಮೊಗ್ಗದಲ್ಲಿ ಮೆಗ್ಗಾನ್ ರೋಗಿಗಳಿಗೆ ಹಣ್ಣು ಹಂಪಲು,ಬ್ರೆಡ್ಡು ಬಿಸ್ಕತ್ ಹಂಚಲಾಯಿತು.

ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಅಧಿಕಾರಿ ಅವಧಿಯಲ್ಲಿ ನೀರಾವರಿ ಕ್ಷೇತ್ರ, ಪಿಡಬ್ಲೂಡಿ ಮೊದಲಾದ ಇಲಾಖೆಗಳಲ್ಲಿ ಮಾಡಿದ ಕಾರ್ಯ ಇಂದಿಗೂ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡಿ ತೋರಿಸಿದ್ದಾರೆ. ಹಾಗಾಗಿ ಅವರ ಹುಟ್ಟು ಹಬ್ಬವನ್ನ ಆಚರಿಸುವ ಜೊತೆಯಲ್ಲಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಪ್ರಯತ್ನ ಇದಾಗಿದೆ ಎಂದು ನಗರ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಅಭಿಪ್ರಾಯಪಟ್ಟರು.

ಮೆಗ್ಗಾನ್ ಆಸ್ಪತ್ರೆಗಳಲ್ಲಿ 1000 ಹಾಸಿಗೆ ಉಳ್ಳ ಆಸ್ಪತ್ರೆ ಆಗಿರುವುದರಿಂದ ಅಷ್ಟು ಜನಕ್ಕೂ ಹಣ್ಣು, ಬ್ರೆಡ್, ಬಿಸ್ಕತ್ ನೀಡಲಾಗುವುದು ಎಂದು ಅವರು ತಿಳಿಸಿದರು. ಈ ವೇಳೆ ಪಾಲಿಕೆ ಮಾಜಿ ಉಪಮೇಯರ್ ಪಾಲಾಕ್ಷಿ, ಜೆಡಿಎಸ್ ನ ಭಾಸ್ಕರ್ ಮೊದಲಾದವರು ಉಪಸ್ಥಿತರಿದ್ದರು.

  1. IMG-20220518-WA0386

ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ರಿಂದಲೂ ದೇವೇಗೌಡರ ಹುಟ್ಟು ಹಬ್ಬ ಆಚರಣೆ

ಅದರಂತೆ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್  ಮಾಜಿ ಪ್ರಧಾನಿಗಳಾದ ದೇವೇಗೌಡರ ಜನ್ಮದಿನದ ಪ್ರಯುಕ್ತ ವಿಭಿನ್ನಾವಗಿ ಆಚರಿಸಿದರು.

ಇಂದು ಮಧ್ಯಾಹ್ನ ಗೋಪಾಳದ ಶಾರದಾದೇವಿ ಅಂಧರ ಶಾಲೆಗೆ ಭೇಟಿ ಮಾಡಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನ ಆಚರಿಸಿದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button