ಸ್ಥಳೀಯ ಸುದ್ದಿಗಳು

ಸಾಹಿತಿ ಡಿ.ಎಸ್.ನಾಗಭೂಷಣ್ ಇನ್ನಿಲ್ಲ

ಸುದ್ದಿಲೈವ್.ಕಾಂ/ಶಿವಮೊಗ್ಗ

ಖ್ಯಾತ ಸಾಹಿತಿ, ವಿಮರ್ಶಕ, ನಿಷ್ಠೂರವಾದಿ, ಡಿ.ಎಸ್. ನಾಗಭೂಷಣ್ ಇದು ನಿಧನರಾಗಿದ್ದಾರೆ. ಶ್ರೀಯುತರಿಗೆ 70 ವರ್ಷ ವಯಸ್ಸಾಗಿತ್ತು.

ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು.

ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’,

‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ’(ಜಿಎಸ್ಸೆಸ್ ಅಭಿನಂದನೆ ಗ್ರಂಥ), ‘ಗಾಂಧಿ ಕಥನ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಸದ್ಯ ಅವರು ತಮ್ಮ ಪತ್ನಿ ಸವಿತಾ ನಾಗಭೂಷಣ ಅವರೊಂದಿಗೆ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button