ಸುದ್ದಿ

ವಿಷ್ಣು ಸಹಸ್ರನಾಮ ಪಠಣೆ ಮೂಲಕ ನಡೆದ ನಾರಾಯಣ ಸ್ಮರಣೆ

ಸುದ್ದಿಲೈವ್. ಕಾಂ/ಶಿವಮೊಗ್ಗ

ಅಜೇಯ ಸಾಂಸ್ಕೃತಿಕ ಬಳಗ,ವಿಪ್ರ ನೌಕರರ ಕ್ಷೇಮಾಭಿವೃದ್ದಿ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕಳೆದ ನವೆಂಬರ್ ನಲ್ಲಿ ದೈವಾಧೀನರಾದ ಕೆ.ಎಸ್.
ನಾರಾಯಣಾಚಾರ್ಯ ಅವರ ಹೆಸರಿನಲ್ಲಿ ನಾರಾಯಣ ಸ್ಮರಣೆ ಕಾರ್ಯಕ್ರಮವನ್ನು ನಗರದ ಕುವೆಂಪು
ರಂಗಮಂದಿರದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿಷ್ಣು ಸಹಸ್ರನಾಮ
ಪಾರಾಯಣವನ್ನು ಹಮ್ಮಿಕೊಳ್ಳಲಾಗಿತ್ತು.
ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು,ವಿಷ್ಣು ಸಹಸ್ರನಾಮ ಪಾರಾಯಣ ಮಾಡುವ ಮೂಲಕ ರಂಗಮಂದಿರದಲ್ಲಿ ಆಧ್ಯಾತ್ಮಿಕ ವಾತಾವರಣವನ್ನು
ಸೃಷ್ಟಿಸಿದರು.

ಅರಳುಮಲ್ಲಿಗೆ ಪಾರ್ಥಸಾರಥಿ ವಿಷ್ಣು ಸಹಸ್ರನಾಮ ಪಾರಾಯಣದ ವ್ಯಾಖ್ಯಾನವನ್ನು ನೀಡಿದರು.ಅರಳುಮಲ್ಲಿಗೆ ಪಾರ್ಥಸಾರಥಿಯವರು ತಾವು ರಚಿಸಿದ
ಕೃತಿಗಳನ್ನು ಈಶ್ವರಪ್ಪ ನೀಡಿದರು.ಎಸ್.ದತ್ತಾತ್ರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ, ಎಂ.ಎ.ಸುಬ್ರಹ್ಮಣ್ ಯ,ಜೆ.ರಾಮಾಚಾರ್,ಹೆಚ್.ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ರಂಗಬ್ರಹ್ಮ ಡಾ.ಎಸ್.ಎಲ್.ಎನ್.ಸ್ವಾಮಿ
ನಡೆಸಿಕೊಟ್ಟರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button