ಸ್ಥಳೀಯ ಸುದ್ದಿಗಳು

ಮೇ.25 ರಂದು ನಗರ ಮತ್ತು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಸುದ್ದಿಲೈವ್.ಕಾಂ/ಶಿವಮೊಗ್ಗ

ಮೇ 25 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಎಂ.ಆರ್.ಎಸ್. ಶಿವಮೊಗ್ಗದಲ್ಲಿ ತುರ್ತಾಗಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ನಗರ ವ್ಯಾಪ್ತಿಯ ಬಡವಾಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನೆಹರೂ ಕ್ರೀಡಾಂಗಣ ಸಮೀಪ, ಜಯನಗರ, ದುರ್ಗಿಗುಡಿ, ಬಿ.ಹೆಚ್.ರಸ್ತೆ, ತಿಲಕ್‍ನಗರ, ಪಾರ್ಕ್ ಬಡಾವಣೆ, ಶಂಕರಮಠ ರಸ್ತೆ, ವಿದ್ಯಾನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಗಣಪತಿ ಲೇಔಟ್, ಚಿಕ್ಕಲ್, ವೆಂಕಟೇಶ್ವರನಗರ, ಮಂಜುನಾಥ ಬಡಾವಣೆ,

ರಾಜೀವ್‍ಗಾಂಧಿ ಬಡಾವಣೆ, ನಂಜಪ್ಪ ಬಡಾವಣೆ, ಪ್ರಿಯಾಂಕ ಬಡಾವಣೆ, ವಡ್ಡಿನಕೊಪ್ಪ, ಮಲವಗೊಪ್ಪ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮೇ 25 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-8 ಫೀಡರ್‍ನಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿಧ.

ಹೊಳೆಬೆನವಳ್ಳಿ, ಡೊಡ್ಡ ತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸಳಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button