ಅವೈಜ್ಞಾನಿಕ ಸ್ಮಾರ್ಟ್ ಸಿಟ ಕಾಮಗಾರಿ ವಿರುದ್ಧ ಸಿಡಿದೆದ್ದ ಜಿಲ್ಲಾ ಕಾಂಗ್ರೆಸ್

ಸುದ್ದಿಲೈವ್.ಕಾಂ/ಶಿವಮೊಗ್ಗ
ಶಿವಮೊಗ್ಗದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯ ವಿರುದ್ಧ ಕಾಂಗ್ರೆಸ್ ಜಿಲ್ಲಾಸಮಿತಿಶಿವಮೊಗ್ಗ ಕುವೆಂಪು ರಸ್ತೆಯಲ್ಲಿ ಕುಳಿತು ರಸ್ತೆ ತಡೆ ಚಳುವಳಿ ನಡೆಸಿತು.
ಸಚಿವ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ, 40% ಕಮಿಷನ್ ಸರ್ಕಾರ, ಮೋರಿ ಕಾಮಗಾರಿಯಲ್ಲಿಯೂ ಹಣ ಲೂಟಿ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಘೋಷಣೆ ಕೂಗಿದೆ.
ನಗರದಲ್ಲಿ ನಡೆಯುತ್ತಿರುವ 15 ವಾರ್ಡ್ ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಿಂತ ಮೊದಲು ಎಲ್ಲಾ ಮೋರಿ ಮತ್ತು ಚರಂಡಿಗಳು ನೆಟ್ಟಗಿದ್ದವು. ಮಳೆ ನೀರು ಸರಾಗವಾಗಿ ಹರಿಯುತ್ತಿತ್ತು. ಆದರೆ ಈಗ ಸ್ಮಾರ್ಟ್ ಸಿಟಿ ಕಾಮಗಾರಿ ಶೇ. 80 ರಷ್ಟು ಕಾಮಗಾರಿ ಮುಗಿದಿದೆ. ಆದರೆ ಯಾವ ರಾಜಕಾಲುವೆ, ಬಾಕ್ಸ್ ಚರಂಡಿಯಲ್ಲಿ ನೀರುಹರಿಯದೆ ರಸ್ತೆಯ ಮೇಲೆ ನೀರು ಹರಿಯುತ್ತಿದೆ.
ಇದರಿಂದ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಮೊನ್ನೆ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಈ ಹಿಂದೆ ಮಳೆ ಬಿದ್ದರೆ ಕೆಲ ಬಡಾವಣೆಗಳಿಗೆ ನೀರು ನುಗ್ಗುತ್ತಿತ್ತು. ಈಗ ಎಲ್ಲಾ ಬಡಾವಣೆಗಳು ಜಲಾವೃತಗೊಂಡಿದೆ. ಇದು ಬಜೆಪಿಯ ಕೊಡುಗೆ ಎಂದು ಪ್ರತಿಭಟನಾಕಾರು ಆಗ್ರಹಿಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿಯಿಂದಮೊನ್ನೆ ಮಳೆಗೆ ನೀರುನುಗ್ಗುತ್ತಿತ್ತು. ಮೂರು ಬಡಾವಣೆಗಳು ಮಾತ್ರ 60 ವರ್ಷದಿಂದ ಮುಳುಗುತ್ತಿತ್ತು. ಆದರೆ ಮೊನ್ನೆ ಬಿದ್ದ ಮಳೆ ಜನಜೀವನವನ್ನ ಹಾಳು ಮಾಡಿದೆ. ಹಾಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನ ನ್ಯಾಯಾಂಗ ತನಿಖೆ ಆಗಬೇಕೆಂದು ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ರೇಖಾರಂಗನಾಥ್, ಯುವಕಾಂಗ್ರೆದ್ ನ ರಂಗನಾಥ್, ಜಿಲ್ಲಾಧ್ಯಕ್ಷ ಗಿರೀಶ್, ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಎನ್ ಡಿ ಪ್ರವೀಣ ಮೊದಲಾದವರು ಭಾಗಿಯಾಗಿದ್ದರು.
