ಉದ್ಯೋಗವಾರ್ತೆ

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಅವಕಾಶ-ನೇರ ಸಂದರ್ಶನ

ಸುದ್ದಿಲೈವ್.ಕಾಂ/ಶಿವಮೊಗ್ಗ

ಪ್ರತಿಷ್ಠಿತ ಕಂನಿಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮುಂದಾಗಿದೆ. ಮೇ. 27 ರಂದು ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅರ್ಹ ಅಭ್ಯರ್ಥಿಗಳಿಗೆ ನೇರಸಂದರ್ಶನವನ್ನ ಹಮ್ಮಿಕೊಂಡಿದೆ.

ಅಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಕಂಪನಿಗಳು ಆಯ್ಕೆ ಮಾಡಿಕೊಳ್ಳಲಿದೆ.

ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9108235132 /9482023412 ಗಳನ್ನು ಸಂಪರ್ಕಿಸುವುದು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button