ಸ್ಥಳೀಯ ಸುದ್ದಿಗಳು

ನಾಳೆ ಆಶಾಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ

ಸುದ್ದಿಲೈವ್.ಕಾಂ/ಶಿವಮೊಗ್ಗ

ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸಿದ ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಮೇ 25ರಂದು ಮಧ್ಯಾಹ್ನ 2 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸರ್ಜಿ ಆಸ್ಪತ್ರೆಯ ಮುಖ್ಯ ವೈದ್ಯ ಡಾ. ಧನಂಜಯ ಸರ್ಜಿ ತಿಳಿಸಿದರು.

ಅವರು ಸುದ್ದಿಲೈವ್ ನೊಂದಿಗೆ ಮಾತನಾಡಿ, ಜಿಲ್ಲಾ ಆಗೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿ, ಸರ್ಜಿ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕೋವಿಡ್ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಧೈರ್ಯವನ್ನು ತುಂಬಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯವನ್ನು ನಿರ್ವಹಿಸಿದ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾದುದು. ಇವರ ಸೇವೆಯನ್ನು ಮನಗಂಡು ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿಯ ಸಹಕಾರದಲ್ಲಿ ಅಭಿನಂದನೆ ಸಲ್ಲಿಸುವುದರ ಜೊತೆಗೆ ಅವರಿಗೆ ಸರ್ಜಿ ಆರೋಗ್ಯ ಕಾರ್ಡ್ ಹಾಗೂ ಕಿಟ್ ವಿತರಿಸಲಾಗುವುದು ಎಂದರು.

ಸರ್ಜಿ ಆರೋಗ್ಯ ಕಾರ್ಡ್‍ಗೆ 500 ರೂ. ಶುಲ್ಕ ವಿಧಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರಿಗೆ ಇದನ್ನು ಉಚಿತವಾಗಿ ನೀಡಲಾಗುವುದು. ಈ ಕಾರ್ಡ್‍ನಿಂದ ಸಲಹಾ ಶುಲ್ಕವಿರುವುದಿಲ್ಲ. ಔಷಧಿಯಲ್ಲಿ ಶೇ. 20ರಷ್ಟು ರಿಯಾಯಿತಿ ಇರುತ್ತದೆ. ಪ್ರಯೋಗಶಾಲೆಗಳಲ್ಲಿ ಶೇ. 40ರಷ್ಟು ರಿಯಾಯಿತಿ ಇದ್ದು, ಅಡ್ಮಿಟ್ ಆದರೆ ಶೇ.20ರಷ್ಟು ರಿಯಾಯಿತಿ ಇರುತ್ತದೆ.

ಅಲ್ಲದೆ, ಮಹಿಳೆಯರ ಸ್ತನ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ಯಾನ್ಸರ್‍ಗಳ ತಪಾಸಣೆಯೂ ಕೂಡ ಉಚಿತವಾಗಿರುತ್ತದೆ. ಆರೋಗ್ಯ ಕಿಟ್‍ನಲ್ಲಿ ಕೊಡೆ, ಆಕ್ಸಿಮೀಟರ್, ಮಾಸ್ಕ್, ಸ್ಯಾನಿಟೈಸರ್, ಸೋಪ್ ಸೇರಿದಂತೆ ವಿವಿಧ ಉಪಕರಣಗಳು ಇರುತ್ತವೆ. ಜಿಲ್ಲೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಈ ಸೌಲಭ್ಯವನ್ನು ನೀಡಲಾಗುವುದು ಎಂದ ಅವರು, ಆಟ ಪಾಠ ಊಟಗಳು ದೇಹಕ್ಕೆ ಶಕ್ತಿ ನೀಡಿದರೆ ಸೇವೆ ಎಂಬುದು ಮನಸ್ಸಿಗೆ ತೃಪ್ತಿ ನೀಡುತ್ತದೆ. ಹಾಗಾಗಿ ಸೇವೆ ಇಂದು ಬಹುಮುಖ್ಯವಾಗಿದೆ ಎಂದು ತಿಳಿಸಿದರು.

ಚೈತನ್ಯ ಫೌಂಡೇಷನ್‍ನ ಸಿಇಓ ಬಿ.ಟಿ. ಭದ್ರೀಶ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 1500 ಆಶಾ ಕಾರ್ಯಕರ್ತೆಯರಿದ್ದಾರೆ. ಅವರ ಅತ್ಯುತ್ತಮ ಸೇವೆ ಅನನ್ಯವಾದುದ್ದು. ಇದನ್ನು ಗುರುತಿಸಿ ಸರ್ಜಿ ಆಸ್ಪತ್ರೆಯ ಸಹಕಾರದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಈ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆಶಾ ಕಾರ್ಯಕರ್ತೆಯರೆಲ್ಲರಿಗೂ ಅಭಿನಂದನಾ ಪತ್ರವನ್ನು ನೀಡುವುದು ವಿಶೇಷವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಲಿ ಶಾಸಕ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ರುದ್ರೇಗೌಡರು, ಆಯನೂರು ಮಂಜುನಾಥ್, ಅಶೋಕ್ ನಾಯ್ಕ್, ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಪಂ ಸಿಇಓ ಎಂ.ಎಲ್. ವೈಶಾಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಆರ್.ಎಸ್.ಎಸ್. ದಕ್ಷಿಣ ಪ್ರಾಂತ್ಯದ ಕಾರ್ಯವಾಹಕ ಪಟ್ಟಾಭಿರಾಮ್, ಧ್ವನಿ ಫೌಂಡೇಷನ್‍ನ ಎಂಡಿ ಗೋಪಿನಾಥ್, ಚೈತನ್ಯ ಸಂಸ್ಥೆಯ ಅಧ್ಯಕ್ಷ ಡಾ. ರೇಜಿ ಜೋಸೆಫ್ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸರ್ಜಿ ಆಸ್ಪತ್ರೆಗಳ ಆಡಳಿತಾಧಿಕಾರಿ ಕೆ.ಆರ್. ಪುರುಷೋತ್ತಮ್, ರಾಘವೇಂದ್ರ ಪ್ರಸಾದ್ ಇದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button