ಉದ್ಯೋಗವಾರ್ತೆ

ಅರೆಕಾಲಿಕ ವರದಿಗಾರರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಸುದ್ದಿಲೈವ್.ಕಾಂ/ಶಿವಮೊಗ್ಗ

ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಿಗೆ ಅರೆಕಾಲಿಕ ವರದಿಗಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಯು ಪಿ.ಜಿ ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದ್ದು, 24 ರಿಂದ 45 ವಯೋಮಿತಿಯಲ್ಲಿರಬೇಕು. ಕನಿಷ್ಟ 02 ವರ್ಷಗಳ ಮಾಧ್ಯಮ ಅನುಭವ ಇರಬೇಕು. ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ/ಪುರಸಭೆ ವ್ಯಾಪ್ತಿಯ 10 ಕಿ.ಮೀ ಆಸುಪಾಸಿನ ಪ್ರದೇಶದಲ್ಲಿ ನೆಲೆಸಿರಬೇಕು.

ಅಭ್ಯರ್ಥಿಗೆ ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್ ಬಗ್ಗೆ ತಿಳುವಳಿಕೆ ಇರಬೇಕು. ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಕ್ಕೆ ವರದಿಗಾರಿಕೆಯಲ್ಲಿ ಅನುಭವವಿರಬೇಕು. ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಯ ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್‍ನ್ನು ಒಳಗೊಂಡ ಅರ್ಜಿಗಳನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಖುದ್ದಾಗಿ ಜೂನ್ 10 ರೊಳಗೆ ತಲುಪುವಂತೆ

ದಿ ಡೆಪ್ಯುಟಿ ಜನರಲ್, (ಇ) & ಹೆಚ್‍ಓಓ,Attn:ರೀಜನಲ್ ನ್ಯೂಸ್ ಯುನಿಟ್, ಆಲ್ ಇಂಡಿಯಾ ರೇಡಿಯೋ, ರಾಜ್‍ಭವನ್ ರಸ್ತೆ, ಬೆಂಗಳೂರು 560001 ವಿಳಾಸಕ್ಕೆ ಕಳುಹಿಸಿಕೊಡಬೇಕು. ಹೆಚ್ಚಿನ ವಿವರಗಳಿಗೆ ದೂ.ಸಂ 8317466729/9448159726/9482169168/080-22356344/22373000 ನ್ನು ಸಂಪರ್ಕಿಸಬಹುದೆಂದು ಪ್ರಸಾರ ಭಾರತಿ ಪ್ರಕಟಣೆ ತಿಳಿಸಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button