ಕನ್ಸ್ಯೂಮರ್ ಕೋರ್ಟ್ ನ ನ್ಯಾಯಾಧೀಶರಿಗೆ ಅನಾರೋಗ್ಯದ ಹಿನ್ನಲೆ-ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ
ಮಾರ್ಗಮಧ್ಯದಲ್ಲಿ ಹಾರ್ಟ್ ಬೀಟ್ ಸಮಸ್ಯೆ ಸಿದ್ದಗಂಗಾಮಠದ ಆಸ್ಪತ್ರೆಯಲ್ಲಿ ಚಿಕಿತ್ಸೆ

ಸುದ್ದಿಲೈವ್.ಕಾಂ/ಶಿವಮೊಗ್ಗ
ಶಿವಮೊಗ್ಗ ನ್ಯಾಯಾಧೀಶ ಸದಾನಂದ ಎಂ ಕಲಾಲ್ ಗೆ ಅನಾರೋಗ್ಯ ಹಿನ್ನೆಲೆ ಝೀರೋ ಟ್ರಾಫಿಕ್ ನಲ್ಲಿ ತುಮಕೂರು ಮೂಲಕ ಬೆಂಗಳೂರಿಗೆ ರವಾನೆ ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಮಾರ್ಗಮಧ್ಯೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ನ್ಯಾಯಾಧೀಶರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ. ಶಿವಮೊಗ್ಗದಿಂದ ಬರುತ್ತಿದ್ದ ಆಂಬುಲೆನ್ಸ್ ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವ ವೇಳೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಲಾಗಿದೆ.
ಗ್ರಾಹಕ ವ್ಯಾಜ್ಯ ನ್ಯಾಯಾಧೀಶರನ್ನ ಶಿವಮೊಗ್ಗದಿಂದಲೇ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಮಾರ್ಗ ಮಧ್ಯದಲ್ಲಿ ಈ ಘಟನೆ ನಡೆದಿದ್ದು ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪ್ರಸ್ತುತ ಶಿವಮೊಗ್ಗದಲ್ಲಿ ಕನ್ಸೂಮರ್ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಧಾರವಾಡದಲ್ಲಿ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ್ದರು.
ಹಿಂದೆ ಮೂತ್ರಪಿಂಡ ಟ್ರಾನ್ಸ್ಲೇಷನ್ ಚಿಕಿತ್ಸೆ ಕೂಡ ನೀಡಲಾಗಿದೆ.10 ದಿನಗಳ ಹಿಂದಷ್ಟೇ ಅಪಘಾತಕ್ಕೆ. ಒಳಗಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ
ಸಿದ್ದಗಂಗಾ ಆಸ್ಪತ್ರೆ ತುಮಕೂರು ಈ ಕುರಿತು ಮಾಹಿತಿ ನೀಡಿದ್ದಾರೆ.
