ಶಿಕ್ಷಣ

ಪಾರಂಪರಿಕ ಕಲೆಗಳ ತರಬೇತಿಗೆ ಅರ್ಜಿ ಆಹ್ವಾನ

ಪಾರಂಪರಿಕ ಕಲೆಗಳ ತರಬೇತಿಗೆ ಅರ್ಜಿ ಆಹ್ವಾ

2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತದಲ್ಲಿ 4 ವರ್ಷಗಳ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯೊಂದಿಗೆ ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯನ್ನು ನೀಡಲಾಗುವುದು. ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಮೆಟ್ರಿಕ್‍ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗವುದು.
ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಮೇ 31 ರೊಳಗೆ ಆಯಾ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ https://bcwd.karnatakaka.gov.in ನ್ನು ನೋಡುವುದು. ಹಾಗೂ ಸಹಾಯವಾಣಿ ಸಂಖ್ಯೆ 8050770004 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button