ತಾಲ್ಲೂಕು ಸುದ್ದಿ
ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ!

ಸುದ್ದಿಲೈವ್.ಕಾಂ/ತೀರ್ಥಹಳ್ಳಿ
ಮೇಗರವಳ್ಳಿ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದ್ದು.ಅರಣ್ಯ ರಕ್ಷಕ ಗಣೇಶ್ ಮತ್ತು ಉಪ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಯ ಹೆಗ್ಗೋಡು ಸಮೀಪದ ರಾಕೇಶ್ ಎಂಬುವರು ಅರಣ್ಯ ಒತ್ತುವರಿ ಮಾಡಿಕೊಂಡು ಜೆಸಿಬಿ ಯಂತ್ರವನ್ನು ಬಳಸಿ ಭೂಮಿಯನ್ನು ಸಮತಟ್ಟು ಮಾಡುತ್ತಿರುವಾಗ ತಡೆಯಲು ಬಂದ ಮೇಗರವಳ್ಳಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.
ರಾಕೇಶ್ ಎಂಬುವರು ಉಪ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಮತ್ತು ಅರಣ್ಯ ರಕ್ಷಕ ಗಣೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅರಣ್ಯ ಸಿಬಂದಿಗಳು ತೀರ್ಥಹಳ್ಳಿ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ .ಜೆಸಿಬಿ ಯಂತ್ರವನ್ನು ವಶಪಡಿಸಿಕೊಂಡಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ ಎಂದು ತಿಳಿದುಬಂದಿದೆ .
