ಕ್ರೈಂ

ಲವ್ ಫೈಲ್ಯೂರ್-ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ

ಸುದ್ದಿಲೈವ್.ಕಾಂ/ಶಿವಮೊಗ್ಗ

ಲವ್ ಫೈಲ್ಯೂರ್ ಆಗಿದ್ದಕ್ಕೆ ಇಬ್ಬರು ಸರ್ಕಾರಿ ನೌಕರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯಲ್ಲಿ ಮದುವೆಗೆ ಒಪ್ಪದ ಹಿನ್ನಲೆಯಲ್ಲಿ ಇಬ್ವರು  ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪಿಸಿ  ಹಾಗೂ ಬೆಳಗಾವಿ ಮೂಲದ ಪ್ರವೀಣ ಎಂಬ ಅರಣ್ಯ ಫಾರೆಸ್ಟರ್ ಇಬ್ವರು ಆತ್ಮಹತ್ಯೆಗೆ ಯತ್ನಿಸಿ ಮೆಗ್ಗಾನ್ ಗೆ ದಾಖಲಾಗಿದ್ದಾರೆ.‌ ಆದರೆ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಧ್ಯಕ್ಕೆ ಇಬ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ 7.30ರ ಸಮಯದಲ್ಲಿ ತೀರ್ಥಹಳ್ಳಿ ಪಿಸಿ ಮತ್ತು ಪ್ರವೀಣ ಭದ್ರಾವತಿ ಆರ್ ಎಂಸಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ 6 ವರ್ಷಗಳಿಂದ ಪ್ರೀತಿಸುತ್ತಿದ್ದು ಮನೆಯವರ ಒಪ್ಪಿಗೆ ಇಲ್ಲದೆ ಇದ್ದುದರಿಂದ ಈ ಕೃತ್ಯಕ್ಕೆ ಕೈಹಾಕಿದ್ದಾರೆ ಎನ್ನಲಾಗಿದೆ.

ಯುವತಿ ಭದ್ರಾವತಿ ತಾಲ್ಲೂಕು ಕಲ್ಲಾಪುರ ವಾಸಿಯಾಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಡಬ್ಲೂ ಪಿ ಸಿ ಆಗಿದ್ದಾರೆ.    ಮತ್ತು ಪ್ರವೀಣ ತೀರ್ಥಹಳ್ಳಿಯಲ್ಲಿ ಅರಣ್ಯ ಸಿಬ್ಬಂದಿಯಾಗಿದ್ದು ಸ್ವಂತ ಊರು ಸಂಕೇಶ್ವರ ಬೆಳಗಾವಿ ಜಿಲ್ಲೆಯವರಾಗಿದ್ದಾರೆ.  ಇವರು ಒಟ್ಟಿಗೆ ವಿಷವನ್ನು ಕುಡಿದಿರುತ್ತಾರೆ

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.  ಭದ್ರಾವತಿ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button