ನಾಳೆ ಉಪ್ಪಾರರ ಬೃಹತ್ ಸಮಾವೇಶಕ್ಕೆ ಜಿಲ್ಲೆಯಿಂದ 3000 ಜನ ಭಾಗಿ ನಿರೀಕ್ಷೆ

ಸುದ್ದಿಲೈವ್.ಕಾಂ/ಶಿವಮೊಗ್ಗ
ಅಖಿಲ ಭಾರತ ಭಗೀರಥ ಜಯಂತ್ಯೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶ ನಾಳೆ ನಡೆಯಲಿದ್ದು, 2 ಲಕ್ಷ ಜನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಉಪ್ಪಾರ ಸಂಘದ ಅಧ್ಯಕ್ಷ ಹಾಲಪ್ಪ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಸಮಾಬೇಶವು ಸಾಣೇಹಳ್ಳಿ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು,ಕಾಗಿನೆಲೆ ನಿರಂಜನಾಬನಂದಾಪುರಿ ಮಹಾಸ್ವಾಮಿಗಳು, ಕೂಡಲಸಂಗಮದ ಬಸವ ಮೃತ್ಯುಂಜಯ ಮಹಾಸ್ವಾಮಿಗಳು, ಚಿತ್ರದುರ್ಗದ ಬಸವಮೂರ್ತಿ ಮಾದಾರ ಚೆನ್ನಯ್ಯ ಸೇರಿ 24 ವಿವಿಧ ಜಾತಿಯ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ, ಒಬಿಸಿಯಲ್ಲಿರುವ ಉಪ್ಪಾರ ಸಮಾಜವನ್ನ ಎಸ್ಟಿ ವರ್ಗಕ್ಕೆ ಸೇರಿಸಬೇಕು. ಉಪ್ಪಾರ ಅಭಿವೃದ್ಧಿ ನಿಗಮ ರಚನೆಗೂ ಮೊದಲು ಜಿಲ್ಲೆಗೆ 25 ಕೊಳವೆ ಬಾವಿ ನೀಡಲಾಗುತ್ತಿತ್ತು. ರಚನೆ ಆದಮೇಲೆ 1 ನೀಡಲಾಗುತ್ತಿದೆ. ಇದನ್ನ ಹೆಚ್ಚಿಸುವಂತೆ ಹಾಗೂ ಇತರೆ ಬೇಡಿಕೆಗಳನ್ನ ಈಡೇರಿಸುವಂತೆ ಸಮಾವೇಶದಲ್ಲಿ ಒತ್ತಾಯಮಾಡಲಾಗುವುದು. ಹಾಗಾಗಿ ಪ್ರತಿ ಜಿಲ್ಲೆಯಲ್ಲಿ ರಾಜ್ಯದಿಂದ 2 ಲಕ್ಷ ಜನ ಈ ಸಮಾವೇಶದಲ್ಲಿ ಸೇರುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 3000 ಸಮಾಜ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಕಟ್ಟೆ ಬಳಗದಿಂದ ಬಸ್ ಮಾಡಿಕೊಂಡು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಖಜಾಂಚಿ ನಾಗರಾಜ್ ಕಂಕಾರಿ ಉಪಸ್ಥಿತರಿದ್ದರು.
