ಶಿಕ್ಷಣ

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

ಸುದ್ದಿಲೈವ್. ಕಾಂ/ಶಿವಮೊಗ್ಗ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ದಿನಾಂಕ: 10.06.2022 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ: 0821-2515944 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button