ಸ್ಥಳೀಯ ಸುದ್ದಿಗಳು

ನಗರದಲ್ಲಿ ಎರಡು ದಿನ ನೀರಿನ ವ್ಯತ್ಯಯ

ಸುದ್ದಿಲೈವ್. ಕಾಂ/ಶಿವಮೊಗ್ಗ

ಮೆಸ್ಕಾಂ ಕಾಮಗಾರಿ ಅಡಿಯಲ್ಲಿ ಮೆಸ್ಕಾಂನ 11 ಕೆವಿ ನಿರ್ವಾಹಣೆ ಮಾಡುವ ಹಿನ್ನಲೆಯಲ್ಲಿ ಎರಡು ದಿನ ಶಿವಮೊಗ್ಗದಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು  ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೆಸ್ಕಾಂ ವತಿಯಿಂದ ಘಟಕ-05 ಮತ್ತು 06ರ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಸಂಬಂಧ ಜೂ.04 ರಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಕೃಷ್ಣರಾಜೇಂದ್ರ ಜಲಶುದ್ದೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಜೂ.04 ಮತ್ತು ಜೂ.05 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆ ಹಾಗೂ ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button