ಪೊಲೀಸರ ಮೇಲೆ ಹಲ್ಲೆ-ರೌಡಶೀಟರ್ ಕಾಲಿಗೆ ಗುಂಡೇಟು

ಸುದ್ದಿಲೈವ್.ಕಾಂ/ಶಿವಮೊಗ್ಗ
ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿ ಕಾಲಿಗೆ ಗುಂಡು ಹಾರಿಸಲಾಗಿದೆ. ರೌಡಿ ಅರ್ಷದ್ ಖಾನ್ (24) ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ಶಿವಮೊಗ್ಗ ಬುದ್ಧನಗರದ ರೌಡಿ ಅರ್ಷದ್ ಕಾಲಿಗೆ ತಗುಲಿದ ಗುಂಡು ಹಾರಿಸಲಾಗಿದೆ. ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರಿಂದ ದಾಳಿ.ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ವೇಳೆ ತುಂಗ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಗುಂಡಿನದಾಳಿ ನಡೆಸಿದ್ದಾರೆ.
ಇಂದು ಮುಂಜಾನೆ 8.30 ರಿಂದ 9 ಗಂಟೆ ಸಮಯದಲ್ಲಿ ಗುಂಡಿನ ದಾಳಿ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಅನುಪಿನಕಟ್ಟೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಗುಂಡಿನ ದಾಳಿಗೆ ಒಳಗಾದ ಆರೋಪಿಯನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಲಿಗೆ, ಡಕಾಯಿತನ ಪ್ರಕರಣದಲ್ಲಿ ಆರೋಪಿ ಪೊಲೀಸರಿಗೆ ಬೇಕಾಗಿದ್ದ ಅರ್ಷದ್ ಕೊಲೆ, ಬೆದರಿಕೆ, ಸುಲಿಗೆ ಪ್ರಕರಣವೊಂದರಲ್ಲಿ ಜಾಮೀನು ಪಡೆದು, ಹೊರಬಂದಿದ್ದನು. ಆದರೆ ಮೊನ್ನೆ ತುಂಗನಗರಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣವೊಂದಕ್ಕೆ ಬೇಕಾಗಿದ್ದು ಹಿಡಿಯಲು ಹೋದಾಗ ಈ ಘಟನೆ ನಡೆದಿದೆ.
