ಸುದ್ದಿ

ರಾಜ್ಯದ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2022 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2022 ರಲ್ಲಿ ಪ್ರಥಮ ಮುದ್ರಣವಾಗಿ ಜನವರಿ 1 ರಿಂದ ಜೂನ್ 30 ರೊಳಗೆ ಪ್ರಕಟಗೊಂಡ ಸಾಹಿತ್ಯ ಕಲೆ, ವಿಜ್ಞಾನ ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ದಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವ ಸಾಕ್ಷರರ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ ಇತ್ಯಾದಿ ವಿಷಯಗಳ ಕನ್ನಡ/ಆಂಗ್ಲ/ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ಜೂನ್ 20 ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ, ದೂ.ಸಂ: 08182-222905 ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಸಿ.ಜೆ.ವೆಂಕಟೇಶ್ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button