ರಾಜಕೀಯ

ಶಿಕ್ಷಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಎನ್ ಎಸ್‌ಯು ಐ ಪ್ರತಿಭಟನೆ

ಶಿಕ್ಷಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸಿ ಹಾಗೂ  ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 20 ಹೆಚ್ಚು nsui ಕಾರ್ಯಕರ್ತರನ್ನು ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತವನ್ನು ಕೇಸರೀಕರಣಗೊಳಿಸುತ್ತಾ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅವರಂತಹ ಅನರ್ಹರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆಗ್ರಹಿಸಿತು.

ವ್ಯಕ್ತಿ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯವಾಗಿದೆ. ಇಂತಹ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿ ಅವನಿಂದ ಪಠ್ಯಪುಸ್ತಕ ರಚನೆ ಮಾಡಿ ವಿದ್ಯಾರ್ಥಿಗಳ ದಿಕ್ಕುತಪ್ಪಿಸುತ್ತಿರುವ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ರೋಹಿತ್ ಚಕ್ರತೀರ್ಥನನ್ನು ಅಮಾನತುಗೊಳಿಸಿ ಕೇಸು ದಾಖಲಿಸಬೇಕು ಎಂದುವಾಗ್ರಹಿಸಲಾಯಿತು.

ಶಿಕ್ಷಣ ಸಚಿವ ನಾಗೇಶ್ ಮನೆ ಮುಂದೆ ಪ್ರತಿಭಟನೆ ನಡೆಸಿದ  ಎನ್.ಎಸ್.ಯು.ಐ. ಕಾರ್ಯಕರ್ತರ ಮೇಲೆ  ಸುಳ್ಳು ಮೊಕದ್ದಮೆಯನ್ನು ಹೇರಲಾಗಿದ್ದು ಇದನ್ನ ವಜಾಗೊಳಿಸಿ ಕಾರ್ಯಕರ್ತರನ್ನ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ  ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ವಿಜಯ್ , ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ ,ನಗರ ಅಧ್ಯಕ್ಷ ಚರಣ್ , ರವಿ ಕಾಟಿಕೆರೆ, ಚಂದ್ರೋಜಿ ರಾವ್, ರವಿ,ಪ್ರದೀಪ್, ತೋಫಿಕ್, ಸೂರಜ್, ಕಿರಣ್,ಪ್ರಮೋದ್, ಸಮರ್ಥ್ ,ಆಕಾಶ್ ,ಉಲ್ಲಾಸ್ ನಾಗೇಂದ್ರ ಆಟೋ , ಕಾಂಗ್ರೆಸ್ ಮುಖಂಡರಾದ GD ಮಂಜುನಾಥ್ ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಮಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್,ಯುವ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ,ಮಲವಗೊಪ್ಪ ಶಿವು ,ಗಿರೀಶ್ ಹಾಗೂ ಮುಂತಾದವರು ಪಾಲ್ಗೊಂಡಿದ್ದರು

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button