ಸುದ್ದಿ

ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ

2022-23 ನೇ ಸಾಲಿನ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ಮಂಜೂರಾದ ಬಿ.ಐ.ಇ.ಆರ್.ಟಿ ಖಾಲಿ ಇರುವ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

ಅರ್ಜಿಯನ್ನು ದಿನಾಂಕ:08/06/2022 ರಂದು ಕಛೇರಿ ಸಮಯದೊಳಗೆ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಅರ್ಜಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು. 2021-22 ನೇ ಸಾಲಿನಲ್ಲಿ ನೇರಗುತ್ತಿಗೆಯಡಿಯಲ್ಲಿ ಕೆಲಸ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಪ್ರಾಥಮಿಕ ವಿಭಾಗ : ನಿಗಧಿಪಡಿಸಿದ ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ/ಪಿಯುಸಿ/ಎಂಸಿಟಿಟಿ ಮತ್ತು ವಿಶೇಷ ಡಿಇಡಿ, ಪ್ರೌಢ ಶಾಲಾ ವಿಭಾಗ : ನಿಗಧಿಪಡಿಸಿದ ವಿದ್ಯಾರ್ಹತೆ : ಬಿ.ಎ./ಬಿ.ಎಸ್ಸಿ. ವಿಶೇಷ ಬಿಇಡಿ

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button