ಸುದ್ದಿ

ಒಂದು ದಾಳಿ ನೂರಾರು ಅರ್ಜಿ ವಿಲೇವಾರಿ…!

ಸುದ್ದಿಲೈವ್.ಕಾಂ/ಶಿವಮೊಗ್ಗ

ಒಂದು ಎಸಿಬಿ ದಾಳಿಯಿಂದಾಗಿ ಎರಡ್ಮೂರು ತಿಂಗಳಿನಿಂದ ಬಾಕಿ ಉಳಿದಿದ್ದ ಅರ್ಜಿಗಳನ್ನೆಲ್ಲ ವಿಲೇವಾರಿ ಮಾಡಲಾಗಿದೆ.  ಇಂತದ್ದೊಂದು ಘಟನೆ ಶಿವಮೊಗ್ಗದ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯಿದೆ ಕಚೇರಿಯಲ್ಲಿ ನಡೆದಿದೆ.

ದಿನಸಿ ಅಂಗಡಿ ನೋಂದಣಿಗೆ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಅರ್ಜಿ ವಿಲೇವಾರಿಗೆ ಅಲ್ಲಿನ ಎಫ್‌ಡಿಎ 2ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ಕೊಡುವಾಗ ಜೂನ್1ರಂದು ರೆಡ್‌ಹ್ಯಾಂಡ್ ಆಗಿ ಆರೋಪಿಯನ್ನು ಬಂಧಿಸಲಾಯಿತು. ನಂತರ ಅಧಿಕಾರಿ, ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದರ ಪರಿಣಾಮ ಮೂರು ದಿನದಲ್ಲಿ ಶಿವಮೊಗ್ಗ ತಾಲ್ಲೂಕು ಕಚೇರಿಯ 196 ಹಾಗೂ ಜಿಲ್ಲಾ ಕಚೇರಿಯ 93 ಅರ್ಜಿಗಳು ಸೇರಿ 289 ಅರ್ಜಿಗಳು ವಿಲೇವಾರಿಯಾಗಿದ್ದು ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದು ಅಧಿಕಾರಿಗಳು ಷರಾ ಬರೆದಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button