ಕ್ರೈಂ

ಗೃಹಸಚಿವರ ತವರು ಜಿಲ್ಲೆಯಲ್ಲಿಯೇ ಸ್ಯಾಟ್ ಲೈಟ್ ಬಳಕೆಯ ಕುರುಹು?

ಸುದ್ದಿಲೈವ್. ಕಾಂ/ಶಿವಮೊಗ್ಗ

ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಉಗ್ರರ ಕರಿ ನೆರಳು? ಶಿವಮೊಗ್ಗ ಜಿಲ್ಲೆಯ ಎರಡು ಕಡೆಗಳಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಬಳಕೆ ಮಾಡಿದ್ದಾರ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಸ್ಯಾಟಲೈಟ್ ಪೋನ್ ಸಿಗ್ನಲ್ ಗಳ ಜಾಡು ಹಿಡಿದು ಸ್ಥಳ ಪರಿಶೀಲನೆಗಾಗಿ ಐಎಸ್ ಡಿ ಅಧಿಕಾರಿಗಳ ತಂಡ ಭೇಟಿ ನೀಡಿರುವ ಹಿನ್ನಲೆಯಲ್ಲಿ ಈ ಸುದ್ದಿ ಮಹತ್ವ ಪಡೆದಿದೆ.

ಸಾಗರ ತಾಲೂಕಿನ ಸಿಗಂದೂರು, ಶಿಕಾರಿಪುರ ಸಮೀಪದಲ್ಲಿ ಸ್ಯಾಟಲೈಟ್ ಪೋನ್ ಬಳಕೆಯಾಗಿದೆಯಾ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.ಸಿಗಂದೂರು ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಪೋನ್ ಬಳಸಲಾಗಿದೆಯಾ ಎಂಬ ಶಂಕೆ ಕೇಳಿಬಂದಿದೆ.

ಶಿಕಾರಿಪುರ ಪಟ್ಟಣಕ್ಕೆ ಸಮೀಪದಲ್ಲಿಯೇ ಸ್ಯಾಟಲೈಟ್ ಪೋನ್ ಬಳಕೆ ಆಗಿತ್ತಾ? ಎಂಬ ಶಂಕೆಯೂ ವ್ಯಕ್ತವಾಗಿದೆ. ಗೃಹ ಸಚಿವರ ತವರಲ್ಲಿ ಅರಣ್ಯ ಪ್ರದೇಶ ಹಾಗೂ ಪಟ್ಟಣ ಪ್ರದೇಶವನ್ನು ಸ್ಯಾಟಲೈಟ್ ಪೋನ್ ಬಳಕೆಗೆ ಆಯ್ಕೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ವ್ಯಕ್ತವಾಗಿದೆ.

ಕಳೆದ 15 ದಿನಗಳ ಹಿಂದೆ ನಿಷೇಧಿತ ಸ್ಯಾಟಲೈಟ್ ಪೋನ್ ಬಳಕೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಯಾಟ್ ಲೈಟ್ ಬಳಕೆ ರಾಜ್ಯದ ಅಂತರಿಕ ಭದ್ರತಾ ವಿಭಾಗದ ಪೊಲೀಸರ ನಿದ್ದೆ ಕೆಡಿಸಿದೆ?!

ನಿಷೇಧಿತ ಸ್ಯಾಟಲೈಟ್ ಪೋನ್ ಬಳಕೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿಯೂ ಸ್ಯಾಟಲೈಟ್ ಪೋನ್ ಬಳಕೆ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಈ ಬೆನ್ನಲ್ಲೇ ಮಲೆನಾಡಿನಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಮಾಡುತ್ತಿರುವುದು ಪತ್ತೆಯಾಗಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೆ ಮತ್ತು ಜಂಟಿ ತನಿಖೆ ಆರಂಭಿಸಿದ್ದಾರೆ.

ಮಂಗಳೂರು ಕಡಲ ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದು ಪತ್ತೆಯಾಗಿದೆ. ನಿಷೇಧಿತ ಸ್ಯಾಟಲೈಟ್ ಪೋನ್ ಬಳಕೆ ಬಗ್ಗೆ  ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ ಎನ್ನಲಾಗಿದೆ.

ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೋಲಿಸರಿಂದ ತನಿಖೆ ಆರಂಭಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದಿನ ದುಷ್ಟರು ಯಾರು ಎಂಬುದು ಪತ್ತೆಯಾಗಬೇಕಿದೆ.

ಅನಿವಾಸಿ ಭಾರತೀಯರಿಂದ ನಿಷೇಧಿತ ಸ್ಯಾಟಲೈಟ್ ಪೋನ್ ಬಳಕೆ ನಡೆದಿದೆಯಾ ಎಂಬ ಶಂಕೆ ಮೂಡಿದೆ. ಪ್ರವಾಸಿಗರ ಸೋಗಿನಲ್ಲಿ ಬಂದವರು ಬಳಕೆ ಮಾಡಿದರಾ ಹಾಗೂಬಳಕೆಯ ಹಿಂದಿನ ಉದ್ದೇಶ ಏನು.? ನಡೆದಿದ್ದ ಹುನ್ನಾರವೇನು ಎಂಬುದು ಮಾಹಿತಿ ಅಧಿಕೃತವಾಗಿ ಹೊರಬರಬೇಕಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button