ರಾಜಕೀಯ

ರೋಹಿತ್ ಚಕ್ರತೀರ್ಥರನ್ನ ಬಂಧಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ

ಸುದ್ದಿಲೈವ್.ಕಾಂ/ಶಿವಮೊಗ್ಗ

ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥರನ್ನ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ರೋಹಿತ್ ಚಕ್ರತೀರ್ಥರ ಪ್ರತಿಕೃತಿ ದಹಿಸಲಾಯಿತು.

ಪಠ್ಯಪುಸ್ತಕ ಪರಿಷ್ಕರಣೆ ಸಮತಿ‌ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಂವಿಧಾನ ಶಿಲ್ಪಿ ಅಂಬೇಡ್ಕರ್, ನಾರಾಯಣ ಗುರು,ಪುರಂದರ ದಾಸರು ಕನಕ ದಾಸರು ಮತ್ತು ಕುವೆಂಪುರವರ ಬಗ್ಗೆಯೂ ಅವಮಾನ ಮಾಡಿದ್ದಾರೆ.

ಅಲ್ಲದೆ ಎಲ್ಲಾ ನಾಯಕರವಿರುದ್ಧ ಬಾಯಿಗೆಬಂದಂತೆ ಮಾತನಾಡಿ ಅಪಮಾನಗೊಳಿಸುತ್ತಿದ್ದಾರೆ. ಹಾಗಾಗಿ ದಾರ್ಶನಿಕರು, ಸಂವಿಧಾನ ಶಿಲ್ಪಿಗಳನ್ನ ಅವಮಾನ ಮಾಡಿದ ರೋಹಿತ್ ಚಕ್ರತೀರ್ತರನ್ನ ಕೂಡಲೇ ಬಂಧಿಸುವಂತೆ ಸಂಘಟನೆ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪಾಲಿಕೆ ವಿಪಕ್ಷ ನಾಯಕಿ ಯಮುನಾರಂಗೇಗೌಡ, ವೈ.ಹೆಚ್.ನಾಗರಾಜ್, ರೇಖಾರಂಗನಾಥ್ ಅಡ್ಡು ಮೊದಲಾದವರು ಉಪಸ್ಥಿತರಿದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button