ಸ್ಥಳೀಯ ಸುದ್ದಿಗಳು
ಕ್ರೀಡಾ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ 10 ಸಾವಿರ ರೂ.ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಅರ್ಹ ಕ್ರೀಡಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ವೆಬ್ಸೈಟ್ http://serviceonline.gov.in/karnataka ಮೂಲಕ ದಿನಾಂಕ: 30/06/2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಹಾಗೂ ದೂ.ಸಂ.: 08182-223328 ನ್ನು ಸಂಪರ್ಕಿಸುವುದು.
