ರಾಜಕೀಯ

ಜೂ.15 ಕ್ಕೆ ತೀರ್ಥಹಳ್ಳಿಗೆ ಸಿದ್ದರಾಮಯ್ಯ

ಸುದ್ದಿಲೈವ್.ಕಾಂ/ತೀರ್ಥಹಳ್ಳಿ

ಜೂ.15 ರಂದು ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ಪಾದಯಾತ್ರೆಯ ಸಮಾವೇಶ ಸಮಾರೋಪ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಜೂನ್.15 ರಂದು ಕಿಮ್ಮನೆ ರತ್ನಾಕರ್ ಅವರು ಬರಗೂರು ರಾಮಚಂದ್ರಪ್ಪನವರ  ಪಠ್ಯಪಸ್ತಕಗಳ ಪರಿಷ್ಕರಣ ಸಮಿತಿಯನ್ನ ಮುಂದು ವರೆಸಬೇಕು ಹಾಗೂ  ಕೋಮು ಬೀಜವನ್ನ ಬಿತ್ತುವ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕ್ರಮಕೈಗೊಳ್ಖಬೇಕೆಂದು ಆಗ್ರಹಿಸಿ ಕುವೆಂಪು ಅವರ ಹುಟ್ಟೂರಾದ ಕುಪ್ಪಳ್ಳಿಯಿಂದ ತೀರ್ಥಹಳ್ಳಿಯವರೆಗೆ ಬೃಹತ್ ಪಾದಯಾತ್ರೆಯನ್ನ ಹಮ್ಮಿಕೊಂಡಿದ್ದಾರೆ.

ಅಙದು ಬೆಳಿಗ್ಗೆ 7 ರಿಂದ ಪಾದಯಾತ್ರೆಗೆ ಚಾಲನೆ ದೊರೆಯಿದೆ. ಬೆಳಿಗ್ಗೆ 11 ಗಂಟೆಗೆ ಕಿಮ್ಮನೆ ರತ್ನಾಕರ್ ನೇತೃತ್ವದ ಪಾದಯಾತ್ರೆ ತೀರ್ಥಹಳ್ಳಿಯಲ್ಲಿ ಬೃಹತ್ ಸಮಾವೇಶ ಕಾರ್ಯಕ್ರಮ ನಡೆಯಲಿದೆ. ಈ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಭಾಗವಹಿಸುವ ನಿರೀಕ್ಷೆ ಇದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button