ದೇವಸ್ಥಾನದ ಹುಂಡಿಗೆ ಕನ್ನಹಾಗಿದ್ದ ಇಬ್ಬರು ಆರೋಪಿಗಳ ಬಂಧನ

ಸುದ್ದಿಲೈವ್.ಕಾಂ/ಭದ್ರಾವತಿ
ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದಲ್ಲಿ ಕಳ್ಳತನಮಾಡಿದ್ದ ಇಬ್ವರು ಆರೋಪಿಗಳನ್ನ ಭದ್ರಾವತಿ ಪೊಲೀಸರು ಬಂಧಿಸಿ 220 ಗ್ರಾಂ ಚಿನ್ನಾಭರಣ, 132 ಗ್ರಾಂ ಬೆಳ್ಳಿ ಮತ್ತು 5000 ರೂ. ನಗದನ್ನ ಅಮಾನತ್ತು ಪಡಿಸಿಕೊಂಡಿದ್ದಾರೆ.
ದಿನಾಂಕ 29-03-2022 ರಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ರೂ 20,000 ರಿಂದ 30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸರು ಪಿಐ ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಿ ಕಾರ್ಯಾಚರಣೆ ನಡೆಸಿದರು. ಆರೋಪಿ ಗಳಾದ ವಸಂತರಾಜು @ವಸಂತ, 37 ವರ್ಷ ಹೊಸಮನೆ ಭದ್ರಾವತಿ ಮತ್ತು ಶ್ವೇತಾ @ ಆಸ್ಮಾ, 32 ವರ್ಷ, ಬೇಡರ ಹೊಸಳ್ಳಿ ಶಿವಮೊಗ್ಗ ರವರುಗಳನ್ನ ಬಂಧಿಸಿದ್ದಾರೆ.
ಆರೋಪಿತರಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ 01 ದೇವಸ್ಥಾನ ಕಳ್ಳತನ ಪ್ರಕರಣ, ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ 2 ಹಗಲು ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 10,25,000/- ರೂ ಗಳ ಒಟ್ಟು 220 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 132 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು ರೂ 5000/- ನಗದು ಹಣವನ್ನು ಅಮಾನತ್ತುಪಡಿಸಿ ಕೊಂಡಿರುತ್ತಾರೆ.
