ಸುದ್ದಿ
ಜೂ.16 ಮತ್ತು 17 ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಸುದ್ದಿಲೈವ್. ಕಾಂ/ಶಿವಮೊಗ್ಗ
ರೈಲ್ವೆ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜೂನ್ 16 ಮತ್ತು 17 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನಗರದ ಕೆಲಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಕಂಡು ಬರಲಿದೆ.
ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
