ಕುಪ್ಪಳ್ಳಿಯಿಂದ ಆರಂಭಗೊಂಡ ಕಿಮ್ಮನೆ ರತ್ನಾಕರ್ ನೇತೃತ್ವದ ಪಾದಯಾತ್ರೆ

ಸುದ್ದಿಲೈವ್. ಕಾಂ/ತೀರ್ಥಹಳ್ಳಿ
ಬರಗೂರು ರಾಮಚಂದ್ರಪ್ಪ ಅವರ ಪಠ್ಯ ಪುಸ್ಥಕ ಸಮಿತಿಯನ್ನ ಮುಂದುವರೆಸಬೇಕು ಕುವೆಂಪುರವರನ್ನ ಅವಮಾನಿಸಿದ ರೋಹಿತ್ ಚಕ್ರತೀರ್ಥರ ಪಠ್ಯಪುಸ್ತಕ ಸಮಿತಿಯನ್ನ ಕೈಬಿಡಬೇಕೆಂದು ಆಗ್ರಹಿಸಿ ಹಮ್ಮಿಕೊಳ್ಳಲಾದ ಪಾದಯಾತ್ರೆ ಆರಂಭವಾಗಿದೆ.
ಮಾಜಿ ಸಚಿವ ಕಿಮ್ನನೆ ರತ್ನಾಕರ್ ನೇತೃತ್ವದಲ್ಲಿ ಕುವೆಂಪುರವರ ಹುಟ್ಟೂರಾದ ಕುಪ್ಪಳ್ಳಿಯಿಂದ ಆರಂಭಗೊಂಡ ಪಾದಯಾತ್ರೆಗೆ ಸಾಹಿತಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಪ್ರಗತಿಪರರು ಸಾಥ್ ನೀಡಿದ್ದಾರೆ..
ಕುಪ್ಪಳ್ಳಿಯ ಕವಿಶೈಲದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕಿಮ್ಮನೆ ರತ್ನಾಕರ್, ಪಾದಯಾತ್ರೆಯನ್ನ ಸರಿಸುಮಾರು 7-10 ಕ್ಕೆ ಚಾಲನೆ ನೀಡಿದರು. ನಂತರ ಮಾಧ್ಯಮಕ್ಕೆ ಮಾತನಾಡಿದ ಕಿಮ್ಮನೆ ರತ್ನಾಕರ್, ರೋಹಿತ್ ಚಕ್ರವರ್ತಿ ಮತ್ತು ಶಿಕ್ಷಣ ಸಚಿವ ನಾಗೇಶರವರು ಮಾಡಿದ ಅಧ್ವಾನವನ್ನ ಕೈಬಿಡಬೇಕು,
ಬಿಜೆಪಿಯ ಹೊಸ ಹೊಸ ಕಾರ್ಯಕ್ರಮವನ್ನ ಅನುಷ್ಠಾನಗೊಳಿಸಲು ನಮ್ಮ ವಿರೋಧವಿಲ್ಲ. ಆದರೆ ಚರ್ಚೆ ನಡೆಸಬೇಕು, ಸದನದಲ್ಲಿ ಚರ್ಚೆ ಮಾಡಬೇಕು. ವಿಷಯವಾರು ಸಮಿತಿ ರಚನೆ ಮಾಡಿ ಇಂತಹ ವಿಷಯವನ್ನ ಜಾರಿಗೊಳಿಸುತ್ತೇವೆ ಎಂಬುದನ್ನ ತಿಳಿಸಿ ನಂತರ ಅನುಷ್ಠಾನಗೊಳಿಸಬೇಕು ಎಂದರು.
ಹಂಸಲೇಖ, ಪತ್ರಕರ್ತ ದಿನೇಶ್ ಅಮೀನಮಟ್ಟು ಸಾಹಿತಿಗಳಾದ ಜಿ.ಸಿದ್ದರಾಮಯ್ಯ,ಪ್ರೊಚೆನ್ನಿ, ವಕೀಲ ಶ್ರೀಪಾಲ, ನಾ.ಡಿಸೋಜ,ಡಿಎಸ್ ಎಸ್ ಗುರು ಮೂರ್ತಿ, ರೈತ ಸಂಘಟನೆಯ ಕೆ.ಟಿ.ಗಂಗಾಧರ್,ಜಿಲ್ಲಾ ಕಸಾಪದ ಅಧ್ಯಕ್ಷ ಡಿ.ಮಂಜುನಾಥ್ ಮೊದಲಾದವರು ಭಾಗಿಯಾಗಿದ್ದರು.
