ಕ್ರೈಂ

15ನೇ ಮೈಲಿಗಲ್ಲಿನಲ್ಲಿ ರಸ್ತೆ ಅಪಘಾತ-ಸ್ಥಳದಲ್ಲಿ ಬೈಕ್ ಸವಾರ ಸಾವು

20220620_221851ಸುದ್ದಿಲೈವ್. ಕಾಂ/ತೀರ್ಥಹಳ್ಳಿ

ತೀರ್ಥಹಳ್ಳಿ ಹೈವೆ ರಸ್ತೆಯ ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ ಇಂದು ಸಂಜೆ 7-45 ರ ಆಜುಬಾಜಿನಲ್ಲಿ ನಡೆದಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

15 ನೇ ಮೈಲಿಗಲ್ಲಿನ ಬಳಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯನ್ನ ಮಣಿಕಂಠ(27) ಎಂದು ಗುರುತಿಸಲಾಗಿದೆ. ಎನ್ ಟ್ರಾಕ್ ದ್ವಿಚಕ್ರವಾಹನದಲ್ಲಿ ಸಂಚರಿಸುವಾಗ ಈ ಅವಘಡ ನಡೆದಿದೆ.

ಹೆಲ್ಮಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ಕಾರಣ ತಲೆಗೆ ಬಲವಾದ ಪೆಟ್ಟುಬಿದ್ದು ಮಣಿಕಂಠ ಸ್ಥಳದಲ್ಲಿಯೇ ಅಸುನೀಗಿದ್ದಾರೆ ಎನ್ನಲಾಗಿದೆ. ಮಾಳೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪಿಎಸ್ ಐ ನವೀನ್ ಕುಮಾರ್ ಮಠಪತಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.20220620_221921

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button