ಸುದ್ದಿ

ಜಿಲ್ಲೆಯ ಮೂರು ಪಾರಂಪರಿತ ತಾಣಗಳಲ್ಲಿ ಯೋಗ 

ಸುದ್ದಿಲೈವ್. ಕಾಂ/ಶಿವಮೊಗ್ಗ/ಭದ್ರಾವತಿ/ತೀರ್ಥಹಳ್ಳಿ/ಸಾಗರ

IMG-20220621-WA0320

ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ವಿವಿಧ ಯೋಗ ಸಂಸ್ಥೆಗಳು, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕಗಳ ಸಹಯೋಗದಲ್ಲಿ ಇಂದು ಜಿಲ್ಲೆಯ ಮೂರು ಪಾರಂಪರಿತ ತಾಣಗಳಾದ ಸಾಗರ ತಾಲ್ಲೂಕಿನ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣ ಇಕ್ಕೇರಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಮತ್ತು ಕ್ಕೆ ಶ್ರೀ ರಾಮೇಶ್ವರ ದೇವಸ್ಥಾನ ಆವರಣ ತೀರ್ಥಹಳ್ಳಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು.

ಸಾಗರ ತಾಲ್ಲೂಕಿನ ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ಶಾಸಕರಾದ ಹರತಾಳು ಉದ್ಘಾಟಿಸಿ, ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.

ನಂತರ ಮಾತನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ದೇಶದಲ್ಲಿ ರೈತರು ಮತ್ತು ಸೈನಿಕರು ನಿಜವಾದ ಯೋಗಿಗಳಾಗಿದ್ದು ಪ್ರತಿಯೊಬ್ಬರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ಇದರಿಂದ ಮನಸ್ಸು ಮತ್ತು ದೇಹಾರೋಗ್ಯ ಹೆಚ್ಚುತ್ತದೆ ಎಂದರು.

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಉದ್ಘಾಟಿಸಿದರು. ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮಾತನಾಡಿ, ಯೋಗಾಭ್ಯಾಸದ ಪ್ರಾಮುಖ್ಯತೆಯನ್ನು ಎಲ್ಲರೂ ತಿಳಿದುಕೊಂಡು ಪ್ರತಿ ಮನೆ ಮನೆಗಳಲ್ಲಿ ಯೋಗಾಭ್ಯಾಸ ಮಾಡಬೇಕೆಂದರು.

ಶ್ರೀ ರಾಮೇಶ್ವರ ದೇವಸ್ಥಾನ ಆವರಣ, ತೀರ್ಥಹಳ್ಳಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು
ಪ್ರಭಾರ ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯೋಗ ಅತ್ಯಂತ ಅವಶ್ಯಕವಾಗಿದ್ದು, ಮಾನಸಿಕ ಸಮಯೋಲನ ಕಾಪಾಡಲು ಹಾಗೂ ದುಶ್ಚಟಗಳಿಂದ ದೂರವಿರಲು ಇದು ಸಹಕಾರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button