ತಾಲ್ಲೂಕು ಸುದ್ದಿ

ಸಾದಮ್ಮನ ಮನೆಯ ಬಾಗಿಲಿಗೆ ಬಂದ ತಹಶೀಲ್ದಾರ್

ಸುದ್ದಿಲೈವ್.ಕಾಂ/ಶಿವಮೊಗ್ಗ

ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಮಂಗಳವಾರ ಹಸ್ತಾಂತರಿಸಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು ಪತ್ರವನ್ನು ಹಸ್ತಾಂತರಿಸಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವವರ ವಿರುದ್ಧ ಕ್ರಮವನ್ನು ಜರುಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಸಂಬಂಧಪಟ್ಟ ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿಗೆ ಈಗಾಗಲೇ ನೊಟೀಸ್ ಜಾರಿಗೊಳಿಸಲಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button