ಶಿಕ್ಷಣ

ಸಾಲ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ

ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತದಿಂದ ಸವಿತಾ ಹಾಗೂ ಅದರ ಉಪ ಜಾತಿಗಳಿಗೆ 2022-23 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ದಿ :03/08/2022 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ಸಾಂಪ್ರದಾಯಿಕ/ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ಕುಲಕಸುಬು/ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯುಟೀಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‍ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.20 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರಕಲಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಮುಂತಾದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.20ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯವಿದೆ.

ಈ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷಗಳ ಒಳಗಿರಬೇಕು. ಮತ್ತು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯೊಳಗಿರಬೇಕು. ಒಮ್ಮೆ ಈ ಯೋಜನೆ ಸೌಲಭ್ಯ ಪಡೆದವರಿಗೆ ಮತ್ತೊಮ್ಮೆ ಅವಕಾಶ ಇರುವುದಿಲ್ಲ.
ಆಸಕ್ತರು ಸುವಿಧ ಜಾಲತಾಣ

https://suvidha.karnataka.gov.in, ರಲ್ಲಿ ಅರ್ಜಿಯನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kassd.karnataka.gov.in ವನ್ನು ಹಾಗೂ ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ,

ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ಹಾಗೂ ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಿವರ ಪಡೆಯಬಹುದು. ಹಾಗೂ ನಿಗಮದ ಜಿಲ್ಲಾ ಕಚೇರಿ ಸಹಾಯವಾಣಿ ದೂರವಾಣಿ ಸಂಖ್ಯೆ : 08182-229634, ಸಹಾಯವಾಣಿ ಸಂ. :080-22374832 ಮತ್ತು 9606066389 ಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button