ಉದ್ಯೋಗವಾರ್ತೆ

ಉದ್ಯೋಗ ಸೃಜನೆ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ.25 ರಿಂದ 35ರ ವರೆಗೆ ಮತ್ತ ನಗರ ಪ್ರದೇಶದಲ್ಲಿ ಶೇ.15 ರಿಂದ 25ರವರೆಗೆ ಸಹಾಯಧನ ಲಭ್ಯವಿದ್ದು, ಈ ಯೋಜನೆಯಡಿ ಹೊಸದಾಗಿ ಚಟುವಟಿಕೆಗಳನ್ನು ಪ್ರಾರಂಭಿಸಲು ಇಚ್ಛಿಸುವ ಜಿಲ್ಲೆಯ ಆಸಕ್ತ ಯುವಕ/ಯುವತಿಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಉತ್ಪಾದನಾ ಘಟಕಗಳಿಗೆ 50 ಲಕ್ಷ ಮತ್ತು ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಟ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿದ್ದು, ಆಸಕ್ತರು ಯೋಜನೆಯ ಮಾಹಿತಿಯನ್ನು ಪಡೆದು www.kviconline.gov.in/pmegpeportal ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು, ಕ.ರಾ.ಖಾ.ಮತ್ತು ಗ್ರಾ.ಮಂ, ಜಿಲ್ಲಾ ಕಚೇರಿ, ‘ಬಿ’ ಬ್ಲಾಕ್-7, ಎರಡನೇಯ ಮಹಡಿ, ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ, ದೂ.ಸಂ. : 08182-223273 / 9480825637 ಗಳನ್ನು ಸಂಪರ್ಕಿಸುವುದು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button