ರಾಜಕೀಯ

ಅಗ್ನಿಪಥ್ ಮತ್ತು ಇಡಿ ವಿರುದ್ಧ ಯುವ ಆಕ್ರೋಶ -ನಾಳೆ ರಾಜ್ ಭವನ್ ಚಲೋ

ಸುದ್ದಿಲೈವ್. ಕಾಂ/ಶಿವಮೊಗ್ಗ

ಅಗ್ನಿಪಥ ಯೋಜನೆ ಹಿಂಪಡೆಯಲು ಒತ್ತಾಯಿಸಿ ಹಾಗೂ ಇ ಡಿ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜೂ.24 ರಂದು ಶುಕ್ರವಾರ ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೇಸ್‌ ಕೋರ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಯುವ ಭವನದಿಂದ ರಾಜ್ ಭವನ್ ವರೆಗೆ  ಯುವ ಆಕ್ರೋಶ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮೊಹಮ್ಮದ ಹ್ಯಾರೀಸ್ ನಲಪಾಡ ನೇತೃತ್ವದಲ್ಲಿ ಯುವಕರು ರಾಜಭವನವರೆಗೆ ರಾಲಿ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿರುವ ಈ ಬೃಹತ್ ಪ್ರತಿಭಟನಾ ರಾಜಮಹಲ್ ಚಲೋಗೆ ಶಿವಮೊಗ್ಗ ಜಿಲ್ಲೆಯ ಎಲ್ಲ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಕಾರ್ಯಕರ್ತ ಬಂಧುಗಳು ಹಾಗೂ ಜಿಲ್ಲೆಯ ಯುವಕ ಮಿತ್ರರು ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸುವಂತೆ  ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ಕೋರಿದ್ದಾರೆ

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button