ಉದ್ಯೋಗವಾರ್ತೆ
ಜೂನ್ 27 ರಂದು ಉದ್ಯೋಗ ಮೇಳ

ಸುದ್ದಿಲೈವ್. ಕಾಂ/ಶಿವಮೊಗ್ಗ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ.27 ರಂದು ಬೆಳಗ್ಗೆ 10.00ಕ್ಕೆ ಗೋಪಾಳದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9108235132 /8151093947 ಗಳನ್ನು ಸಂಪರ್ಕಿಸುವುದು.
