ಕ್ರೈಂ

06 ವರ್ಷ ಬಾಲಕಿಗೆ ಲೈಂಗಿಕ ದೌರ್ಜ್ಯನ್ಯ ವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಸುದ್ದಿಲೈವ್.ಕಾಂ/ಶಿವಮೊಗ್ಗ

2019 ನೇ ಇಸವಿಯಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದ ಆರೋಪಿಗೆ ಶಿವಮೊಗ್ಗದ ಮಾನ್ಯ Addl District and Sessions Judge, FTSC–II (POCSO) ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶಿಸಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ 18 ವರ್ಷ ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆ.

ಈ ಬಗ್ಗೆ ಬಾಲಕಿಯ ಕುಟುಂಬಸ್ಥರು  ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. ಆಗಿನ ತನಿಖಾಧಿಕಾರಿಗಳಾದ ಭದ್ರಾವತಿ ಗ್ರಾಮಾಂತರ ಠಾಣೆಯ ಸಿಪಿಐ ಯೋಗೇಶ್,  ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಲಿಂಗರಾಜ @ ನವೀನ  ಈತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು, ಮಾನ್ಯ Addl District and Sessions Judge, FTSC–II (POCSO) Shivamogga ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ಪ್ರರಣದ ವಿಚಾರಣೆ ನಡೆಸಿ ಇಂದು ಆರೋಪಿಗೆ  20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ ವಿಧಿಸಿ ತೀರ್ಫು ನೀಡಿರುತ್ತಾರೆ.

ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ನೀಡಿರುತ್ತದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button