ಅಗ್ನಿಪಥ್ ವಿರುದ್ಧದ ಹೋರಾಟ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹುನಾರವಷ್ಟೇ-ಸಂಸದ ಬಿವೈಆರ್

ಸುದ್ದಿಲೈವ್.ಕಾಂ/ಶಿವಮೊಗ್ಗ
ದೇಶದಲ್ಲಿ ನಡೆಯುತ್ತಿರುವ ಅಗ್ನಿಪಥ್ ವಿರುದ್ಧ ಹೋರಾಟದಲ್ಲಿ ರಾಜಕೀಯ ಶಕ್ತಿಗಳು ಬೇಳೆಬೇಯಿಸಿಕೊಳ್ಳಲು ಹವಣಿಸುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಗ್ನಿಪಥ್ ಮುಗಿಸಿಕೊಂಡು ಬಂದ ಯೋಧನಿಗೆ ಮುಂದಿನ ಭವಿಷ್ಯಕ್ಕಾಗಿ ಕಾರ್ಪೋರೇಟ್ ಸಂಸ್ಥೆಗಳು ಮುಂದು ಬಂದಿವೆ. ವಿದ್ಯಾಭ್ಯಸಕ್ಕೂ ಆತನಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೇಶದಲ್ಲಿ ನಡೆಯುತ್ತಿರುವ ಅಗ್ನಿಪಥ್ ವಿರುದ್ಧದ ಹೋರಾಟ ಬಹಳ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದರು.
ಅಗ್ನಿಪಥ್ ಯೋಜನೆ ಅತ್ಯುತ್ತಮ ಕಾರ್ಯಕ್ರಮ.ಯುವ ಶಕ್ತಿ ಹಾಳುಗೆಡಹುವ ಷಡ್ಯಂತ್ರವಾಗಿದೆ. ಮೋದಿಯವರಿಗೆ, ಬಿಜೆಪಿ ಸರ್ಕಾರಕ್ಕೆ ಇರಿಸುಮುರಿಸು ಮಾಡುವ ಹುನ್ನಾರ ಇದಾಗಿದೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಈ.ಡಿ. ವಿಚಾರಣೆ ವಿಚಾರ ಕುರಿತು ಮಾತನಾಡಿದ ಅವರು ಸಂವಿಧಾನದಲ್ಲಿ ಎಲ್ಲರಿಗೂ ಒಂದೇ ಕಾನೂನು.ಕಾನೂನಿನಿಂದ ವಿನಾಯಿತಿ ಯಾರಿಗೂ ಇಲ್ಲ ಎಂದು ತಿಳಿಸಿದರು.
ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮು ಅಭ್ಯರ್ಥಿ ಕುರಿತು ಸಿದ್ದರಾಮಯ್ಯ ಟಾಂಗ್ ನೀಡಿರುವ ಬಗ್ಗೆ ಮಾತನಾಡಿದ ಸಂಸದರು 2014ರ ನಂತರ ದೇಶದ ಅಭಿವೃದ್ಧಿ, ಬೆಳವಣಿಗೆ ಕುರಿತು ಎಲ್ಲರಿಗೂ ಗೊತ್ತಿರುವ ವಿಚಾರ.ಎನ್ ಡಿ ಎ ಅಭ್ಯರ್ಥಿ ಬಗ್ಗೆ ಸಿದ್ದರಾಮಯ್ಯ ಮಾತನಾಡುವ ನೈತಿಕ ಹಕ್ಕಿಲ್ಲವೆಂದರು.
