ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸುವಿಧಾ ತಂತ್ರಾಂಶದ ಮೂಲಕ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಮತ್ತು ಸಾಂಪ್ರದಾಯಿಕ/ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳುಲು ಗರಿಷ್ಟ ರೂ.2 ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ಶೇ.4 ರ ಬಡ್ಡಿದರದಲ್ಲಿ ಒದಗಿಸಲಾಗುವುದು. ಹಾಗೂ ಸಾಂಪ್ರದಾಯಿಕ ವೃತ್ತಿಪರ ಸಾಲ ಯೋಜನೆಯಡಿ ಗರಿಷ್ಟ ರೂ.2 ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ಶೇ.2 ರ ಬಡ್ಡಿದರದಲ್ಲಿ ಒದಗಿಸಲಾಗುವುದು.
ಈ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ 1(ಎ) ಯಿಂದ 1(ಕೆ)ನಲ್ಲಿ ಬರುವ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರಾಗಿದ್ದು, ವಯಸ್ಸು 18 ರಿಂದ 55 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಪಟ್ಟಣ ಪ್ರದೇಶದವರಿಗೆ ರೂ.1,20,000/-ದೊಳಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 08 ರೊಳಗೆ ಸುವಿಧಾ ತಂತ್ರಾಂಶ https://suvidha.karnataka.gov.in ಇಲ್ಲಿ ಸಲ್ಲಿಸಬಹುದಾಗಿದ್ದು ನಿಗಮದ ವೆಬ್ಸೈಟ್ https://kmmd.karnataka.gov.in ನ್ನು ಸಹ ನೋಡಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ 080-22374832, ಮೊ.ಸಂ: 9606066389, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ,
ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ: 08182-229634 ಇವರನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರುಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
