ಸುದ್ದಿ
ಗುಡ್ಡೇಕೇರಿ ಬಳಿ ರಸ್ತೆ ಅಪಘಾತ-ಪಿಗ್ಮಿ ಸಂಗ್ರಹಕ ಸಾವು

ಸುದ್ದಿಲೈವ್.ಕಾಂ/ತೀರ್ಥಹಳ್ಳಿ
ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ತೀರ್ಥಹಳ್ಳಿ ಮಾರ್ಗ ಮಧ್ಯೆ ಗುಡ್ಡೇಕೇರಿ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕೈಮರದ ಸೊಸೈಟಿಯ ಪಿಗ್ಮಿ ಸಂಗ್ರಾಹಕ ಸುನೀಲ್ ಸಾವು ಕಂಡಿದ್ದಾರೆ.
ಕೈಮರದಿಂದ ಗುಡ್ಡೇಕೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸನೀಲ್ ಗೆ ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಬೊಲೇನೋ ಕಾರು ಡಿಕ್ಕಿ ಹೊಡೆದಿದೆ. ಮುಖಾಮುಖಿ ಅಪಘಾತದಲ್ಲಿ ಕಾರಿನ ಮುಂಭಾಗ ಹಾನಿಯಾಗಿದೆ. ಬೈಕ್ ನುಜ್ಜುಗುಜ್ಜಾಗಿದೆ. ಗಾಯಾಳು ಸುನೀಲ್ ಗೆ ತೀವ್ರತರನಾದ ಗಾಯಗಳಾಗಿದ್ದು ಸ್ಥಳೀಯರೇ ಆತನನ್ನ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ್ದಾರೆ.
ತಾಕೂಕು ಜೆಸಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ಸುನೀಲ್ ಮಾರ್ಗ ಮಧ್ಯದಲ್ಲಿ ಅಸು ನೀಗಿದ್ದಾನೆ.

