ಸ್ಥಳೀಯ ಸುದ್ದಿಗಳು
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ಫಿಕ್ಸ್

ಸುದ್ದಿಲೈವ್.ಕಾಂ/ಶಿವಮೊಗ್ಗ
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಇವರು ಜುಲೈ 16 ರಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.
ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು.
ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಜು.16 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

