ಶಿಕ್ಷಣ
ವಿವಿಧ ಬೇಡಿಕೆ ಈಡೇರಿಸುವಂತೆ ಕುವೆಂಪು ವಿವಿಯಲ್ಲಿ ಸಿಬ್ವಂದಿಗಳ ಪ್ರತಿಭಟನೆ

ಸುದ್ದಿಲೈವ್. ಕಾಂ/ಶಿವಮೊಗ್ಗ
ಕುವೆಂಪು ವಿಶ್ವ ವಿದ್ಯಾಲಯದ ಅಧ್ಯಾಪಕೇತರ ನೌಕರರಿಂದ ಅನಿರ್ಧಿಷ್ಠಾವಧಿ ಮುಷ್ಕರ ನಡೆಯುತ್ತಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಡ್ತಿ ನೀಡಿರುವ ನೌಕರಿಗೆ ವೇತನವನ್ನು ನಿಗದಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆಂತರಿಕ ವರ್ಗಾವಣೆ ಮಾಡುವಂತೆಯೂ ನೌಕರರು ಬೇಡಿಕೆ ಇಟ್ಟಿದ್ದಾರೆ
ನೌಕರರಿಗೆ ಸರಿಯಾದ ಸಮಯಕ್ಕೆ ಸೌಲಭ್ಯವನ್ನು ಒದಗಿಸಬೇಕು.ಉಪಕುಲಪತಿಗಳ ಸ್ಥಾನಕ್ಕೆ ಸಂದರ್ಶನ ಮಾಡಿ ನಂತರ ಬಡ್ತಿ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ನೌಕರರ ಬೇಡಿಕೆಗಳನ್ನು ಈಡೇರಿಸುವ ವರೆಗೂ ಪ್ರತಿಭಟನೆ ಮುಂದುವರೆಸುದಾಗಿ ಎಚ್ಚರಿಕೆ ನೀಡಲಾಗಿದೆ.

