ಸುದ್ದಿ

ಕದಂಬ ಕನ್ನಡ ವೇದಿಕೆ ಅಧ್ಯಕ್ಷ ವಿಶ್ವನಾಥ ಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದೇಕೆ?

ಸುದ್ದಿಲೈವ್. ಕಾಂ/ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾದ ಸೇವೆ ಒದಗಿಸದ ರೋಗಿಗಳ ಜೀವದ ಜೊತೆ ಚೆಲ್ಲಾಟ ಆಡುತ್ತಿರುವುದು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯತನದ ವಿರುದ್ಧ ಕದಂಬ ಕನ್ನಡ ವೇದಿಕೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮವಾದ ಚಿಕಿತ್ಸೆ ದೊರೆಯದೆ ಸಂಕಷ್ಟಕ್ಕೀಡಾಗಿದೆ.  ಮ್ಯಾನ್ ಪವರ್ ಏಜೆನ್ಸಿಯ ಮೂಲಕ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳು ಹಾಗೂ ತರಬೇತಿಯ ಹಂತದಲ್ಲಿರುವ ನರ್ಸಿಂಗ್‌ ವಿದ್ಯಾರ್ಥಿಗಳು ಸರಿಯಾದ ಚಿಕಿತ್ಸೆ ನೀಡದೆ ಇರುವ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ.‌

ವೈದ್ಯರ ನಿರ್ಲಕ್ಷ್ಯದಿಂದ ಸಾಕಷ್ಟು ಜನಸಾಮಾನ್ಯರು ನೀಡದೆ ಬೇಜವಾಬ್ದಾರಿತನದ ವರ್ತನೆಯನ್ನು ತೋರುತ್ತಿದ್ದು, ತೊಂದರೆ ಅನುಭವಿಸುತ್ತಿದ್ದು, ಸಾರ್ವಜನಿಕರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಭಯ ಪಡುತ್ತಿದ್ದಾರೆ ಮತ್ತು ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಬರಲು ಹಿಂಜರಿಯುತ್ತಿದ್ದಾರೆ.

ದಯಮಾಡಿ ತಾವುಗಳು ಖುದ್ದಾಗಿ ಪರಿಶೀಲನೆ ನಡೆಸಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕೆಂದು ಸಂಘಟನೆ ಮನವಿಯಲ್ಲಿ ಕೇಳಿಕೊಂಡಿದೆ.

ಸಂಘಟನೆಯ ರಾಜ್ಯಾಧ್ಯಕ್ಷ ವಿಶ್ವನಾಥ ಗೌಡ್ರು, ಜಿಲ್ಲಾಧ್ಯಕ್ಷ ನವೀನ್ ಹೆಚ್ ಸಿ, ಶಿವಣ್ಣ ಎಸ್ ಪಿ, ಲಕ್ಷ್ಮೀಶ ಎಸ್, ಗಂಗಾಧರ್, ಆನಂದ, ಸಂತೋಷ್ ಮೊದಲಾದವರು ಉಪಸ್ಥಿರಿದ್ದರು

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button