ಉದ್ಯೋಗವಾರ್ತೆ

ವಸತಿ ಶಾಲೆಗಳಲ್ಲಿ ದಾಖಲಾತಿಗೆ ಸಫಾಯಿ ಕರ್ಮಚಾರಿಗಳ ಮಕ್ಕಳಿಂದ ಅರ್ಜಿ ಆಹ್ವಾನ

ಸುದ್ದಿಲೈವ್. ಕಾಂ/ಶಿವಮೊಗ್ಗ

ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಊಟ ಸಹಿತ ಶಿಕ್ಷಣ ಪಡೆಯಲು ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಮಕ್ಕಳಿಂದ ಮನವಿ ಪತ್ರ ಆಹ್ವಾನಿಸಿದೆ.

ಆಸಕ್ತ ಸಫಾಯಿ ಕರ್ಮಚಾರಿ ಮಕ್ಕಳು ಜಿಲ್ಲೆಯ ಯಾವುದಾದರೂ ಮೊರಾಜಿ ದೇಸಾಯಿ/ಕಿತ್ತೂರು ರಾಣಿ ಚನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳನ್ನು ಸಂಪರ್ಕಿಸಿ, ಗುರುತಿನ ಚೀಟಿ ಮತ್ತು ದಾಖಲಾತಿ ಕೋರಿ ಮನವಿ ಪತ್ರವನ್ನು ದಿ: 05/08/2022 ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕೀಸುವುದು. ಶಿವಮೊಗ್ಗ -9964760766, ಭದ್ರಾವತಿ-9902207754, ತೀರ್ಥಹಳ್ಳಿ-9481078559, ಶಿಕಾರಿಪುರ-9742015586, ಸೊರಬ-9740934526, ಸಾಗರ-9480491668, ಹೊಸನಗರ-9620793267 ಗಳನ್ನು ಸಂಪರ್ಕಿಸುವುದು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button