ಶಿಕ್ಷಣ

ತರಬೇತಿಗೆ ಅರ್ಜಿ ಆಹ್ವಾನ- ಅವಧಿ ವಿಸ್ತರಣೆ

ಸುದ್ದಿಲೈವ್. ಕಾಂ/ಶಿವಮೊಗ್ಗ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ: 16/08/2022 ರವರೆಗೆ ವಿಸ್ತರಿಸಲಾಗಿದೆ.
10ನೇ ತರಗತಿ ಉತ್ತೀರ್ಣರಾಗಿರುವ 18-22 ವಯೋಮಿತಿಯೊಳಗಿನ ಅಭ್ಯರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರ-1ಕ್ಕೆ ರೂ. 2.50 ಲಕ್ಷ ಹಾಗೂ ಪ್ರ-2(ಎ), 3(ಎ), ಹಾಗೂ 3(ಬಿ) ಗಳಿಗೆ ರೂ. 1.00 ಲಕ್ಷಗಳ ಮಿತಿಯಲ್ಲಿರಬೇಕು.

ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೀಡಲಾಗುವುದು. ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

ನಿಗದಿತ ನಮೂನೆ ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.bcwd.karnataka.gov.in ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 16/08/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ದ.ಕ.ಜಿಲ್ಲೆ ದೂ.ಸಂ.: 0824-2225078, ಉಡುಪಿ ಜಿಲ್ಲೆ –ದೂ.ಸಂ.: 0820-2574881, ಉತ್ತರಕನ್ನಡ ಜಿಲ್ಲೆ ದೂ.ಸಂ.: 08382-226589 ಹಾಗೂ ಕೇಂದ್ರ ಕಚೇರಿ ಬೆಂಗಳೂರು 8050770004 ಗಳನ್ನು ಸಂಪರ್ಕಿಸುವುದು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button