ತಾಲ್ಲೂಕು ಸುದ್ದಿ

ಮಾಹಿತಿ ಕಾರ್ಯಗಾರ ಆಯೋಜಿಸಲು ಶಂಕರ್ ಶೇಟ್ ಕರೆ

ಸುದ್ದಿಲೈವ್. ಕಾಂ/ಶಿವಮೊಗ್ಗ

ರಾಷ್ಟ್ರಧ್ವಜ, ರಾಷ್ಟ್ರಗೀತೆ, ಧ್ವಜವಂದನೆ, ಧ್ವಜ ಸಂಹಿತೆ, ಧ್ವಜ ಸಂರಕ್ಷಣೆಯ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಗಾರ ಆಯೋಜಿಸಿ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಹೇಳಿದರು.

ಜನಸಂಗ್ರಾಮ ಪರಿಷತ್ ಸೊರಬ, ಯುವಾ ಬ್ರಿಗೇಡ್ ಸೊರಬ, ನಮ್ಮೂರು ಸಮುದಾಯ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಮಾನ್ಯ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಮನವಿ ಪತ್ರ ಸಲ್ಲಿಕೆ ನೇತೃತ್ವ ವಹಿಸಿ ಮಾತನಾಡಿದ ಅವರು ಸ್ವತಂತ್ರ ಬಂದು 75 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತಸದ ವಿಚಾರ.ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಎಲ್ಲಾ ಕಡೆ ಧ್ವಜಾರೋಹಣ ಮಾಡಬೇಕಾಗಿರುವುದರಿಂದ ಜನರಲ್ಲಿ ಸಾಕಷ್ಟು ತಿಳುವಳಿಕೆ ಇರುವುದಿಲ್ಲ. ಧ್ವಜ ಕಟ್ಟಲು ಹಿಂಜರಿಕೆ ಮಾಡುತ್ತಾರೆ.

ಹೀಗಾಗಿ ತಾಲೂಕ್ ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರಧ್ವಜ, ರಾಷ್ಟ್ರಗೀತೆಯ ಇತಿಹಾಸ, ಧ್ವಜ ಸಂಹಿತೆ, ಧ್ವಜ ಸಂರಕ್ಷಣೆಯ ನಿಯಮಗಳ ಬಗ್ಗೆ ಮಾಹಿತಿಯನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಬೇಕು ಎಂದು ಮಾನ್ಯ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವಾ ಬ್ರಿಗೇಡ್ ನ ಸಂಚಾಲಕ ಮಹೇಶ್ ಕಾರ್ವಿ, ನಮ್ಮೂರು ಸಂಸ್ಥೆಯ ರಾಘವೇಂದ್ರ, ಅಕ್ಕನ ಬಳಗದ ಅಧ್ಯಕ್ಷೆ ರೇಣುಕಮ್ಮ ಗೌಳಿ, ಸ್ನೇಹ ಸುರಭಿ ಮಹಿಳಾ ಸಂಘದ ಸರಸ್ವತಿ ನಾವುಡ, ಪ್ರಾಂಶುಪಾಲ ಮಂಜು, ರಾಜೇಂದ್ರ, ವಿನೋದ್ ವಾಲ್ಮೀಕಿ, ಮಂಜು, ರಂಗನಾಥ ಮೊಗವೀರ, ಗಂಧರ್ವ ಮತ್ತಿತರರು ಉಪಸ್ಥಿತರಿದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button