ಸ್ಥಳೀಯ ಸುದ್ದಿಗಳು
ಭದ್ರ ನದಿಯ ಒಳ ಹರಿವು ಹೆಚ್ಚಳ-ಭದ್ರಾವತಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಸುದ್ದಿಲೈವ್.ಕಾಂ/ಶಿವಮೊಗ್ಗ
ಭದ್ರಾ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಿಂದಾಗಿ ಭದ್ರಾ ಜಲಾಶಯದಿಂದ ನದಿಗೆ 30 ಕ್ಯೂಸೆಕ್ ನೀರು ಹರಿ ಬಿಡಲಾಗಿದೆ. ಒಂದುವೇಳೆ ಮಳೆ ಹೆಚ್ಚಾದರೆ ನದಿಯ ನೀರಿನ ಪ್ರಮಾಣ ಹೆಚ್ಚಳವಾಗಲಿದ್ದು ನದಿಯ ಪಾತ್ರದ ಜನರಿಗೆ ಈಗ ಎಚ್ಚರದಿಂದ ಇರಲು ತಾಲೂಕು ಆಡಳಿತ ಕ್ರಮ ಜರುಗಿಸಿದೆ.
ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಅಧಿಕ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಜಲಾಶಾಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದ್ದು, ಯಾವುದೇ ಕ್ಷಣದಲ್ಲೂ ಹೆಚ್ಚಿನ ನೀರನ್ನ ನದಿಗೆ ಹರಿಸುವ ಸಾಧ್ಯತೆ ಇದೆ.
ಈ ಹಿನ್ನಲೆಯಲ್ಲಿ ಭದ್ರಾವತಿ ತಾಲೂಕಿನ ತಹಶೀಲ್ದಾರ್ ತಮ್ಮ ಎಲ್ಲಾ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲಿ ಇರಲು ಸೂಚಿಸಿದ್ದಾರೆ. ನದಿ ಪಾತ್ರದ ಜನತೆಗೆ ಎಚ್ಚರದಿಂದ ಇರಲು ಸೂಚಿಸಿದ್ದಾರೆ.
ಈಗಾಲೇ ಜಿಲ್ಲೆಯಲ್ಲಿ ಅಧಿಕ ಮಳೆ ಹೆಚ್ಚಳವಾಗುವ ಸಾದ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

