ಕ್ರೈಂ

ಆಗಸ್ಟ್ 18 ರ ವರೆಗೆ ನಿಷೇಧಾಜ್ಞೆ ಜಾರಿ

ಸುದ್ದಿಲೈವ್. ಕಾಂ/ಶಿವಮೊಗ್ಗ

ಫ್ಲೆಕ್ಸ್ ವಿಚಾರವಾಗಿ ನಡೆದ ಗಲಭೆಯ ಹಿನ್ನಲೆಯಲ್ಲಿ ನಗರದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಆ.18 ರ ರಾತ್ರಿ 10 ಗಂಟೆಯ ವರೆಗೆ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ತಹಶೀಲ್ದಾರ್ ಡಾ.ನಾಗರಾಜ್ ಎನ್.ಜೆ ಆದೇಶಿಸಿದ್ದಾರೆ.

ಸೆಕ್ಷನ್ ಹಿನ್ನಲೆಯಲ್ಲಿ ನಗರದಲ್ಲಿ ಐದು ಜನರಿಗಿಂತ ಹೆಚ್ಚು ಜನ ಸೇರುವಂತಿಲ್ಲ. ಯಾವುದೇ ಮೆರವಣಿಗೆ, ಸಭೆ, ಸಮಾರಂಭ ನಡೆಸದಂತೆ ನಿರ್ಬಂಧಿಸಲಾಗಿದೆ. ಯಾವುದೇ ಶಸ್ತ್ರಾಸ್ತ್ರಗಳಾದ ಇಟ್ಟಿಗೆ, ಕಲ್ಲು, ಈಟಿ, ಕತ್ತಿ, ಗದೆ ಸಾಗಾಣಿಕೆ ನಿರ್ಬಂಧಿಸಲಾಗಿದೆ.

ಎಲ್ಲಾ ಚಲನ ಚಿತ್ರಗಳನ್ನ 9 ಗಂಟೆಯ ನಂತರ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಎಲ್ಲಾ ವ್ಯಾಪಾರಗಳು ಸಹ 9 ಗಂಟೆಯ ನಂತರ ಬಂದ್ ಮಾಡಲು ಸೂಚಿಸಲಾಗಿದೆ. ತುರ್ತು ಓಡಾಟಕ್ಕೆ ದಾಖಲೆಗಳನ್ನ ಒದಗಿಸಬೇಕಿದ್ದು ರಾತ್ರಿ 9 ರ ನಂತರ ದ್ವಿಚಕ್ರ ವಾಹನ ಸಂಚಾರವೂ ನಿಷೇಧಿಸಲಾಗಿದೆ.

40 ವರ್ಷದೊಳಗಿನ ಗಂಡಸರ ಹಿಂಬದಿ ಸವಾರರನ್ನಾಗಿ ದ್ವಿಚಕ್ರವಾಹನದಲ್ಲಿ ಕರೆದುಕೊಂಡು ಹೋಗುವುದು ಸಹ ನಿಷೇಧಿಸಲಾಗಿದೆ. ಸರ್ಕಾರಿ ಕಾರ್ಯಕ್ರಮ ನಿಗದಿಯಾಗಿದ್ದರೆ ಪ್ರಾಧಿಕಾರದ ಅನುಮತಿ ಪಡೆದು ನಡೆಸಲು ಸೂಚಿಸಲಾಗಿದೆ‌ . ಸಾರ್ವಜನಿಕ ಭಾಧಕಗಳಿಗೆ ಉಂಟುಮಾಡಬಹುದಾದ ಚಟುವಟಿಕೆಗಳನ್ನ ನಿಷೇಧಿಸಲಾಗಿದೆ.

ಸರ್ಕಾರಿ ಸಂಸ್ಥೆಗಳ/ಸಂಘಟನೆಗಳ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿರುದ್ಧ ಘೋಷಣೆ ಕೂಗುವುದನ್ನ ನಿಷೇಧಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button