ಕ್ರೈಂ

ಪೋಸ್ಕೋ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ.ದಂಡ

ಸುದ್ದಿಲೈವ್. ಕಾಂ/ತೀರ್ಥಹಳ್ಳಿ

ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿವಮೊಗ್ಗದ The Addl District and Sessions, FTSC–II (POCSO)  ನ್ಯಾಯಾಲಯವು 20 ವರ್ಷ. ಕಠಿಣ ಕಾರಾಗೃಹ ವಾಸ 60 ಸಾವಿರ ರೂ. ದಂಡ ವಿಧಿಸಿ ತೀರ್ಪುನೀಡಿ ಆದೇಶಿದೆ.

ದಿನಾಂಕಃ-29-06-2021 ರಂದು ಸಂಜೆ ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಮಕ್ಸೂದ್‌ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಆಗಿನ ತನಿಖಾಧಿಕಾರಿಗಳಾದ ತೀರ್ಥಹಳ್ಳಿ ಸಿಪಿಐ ಪ್ರವೀಣ್ ನೀಲಮ್ಮನವರ್  ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ  ಹರಿಪ್ರಸಾದ್  ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ಇಂದು ಆರೋಪಿ ಮೊಹಮ್ಮದ್‌ ಮಕ್ಸೂದ್‌ ಎಂ.ಹೆಚ್‌, (23)  ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ತೀರ್ಫು ನೀಡಿದ್ದಾರೆ.

ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button